ವಿಜಯಪುರ: ಸಿಎಂ ಸಿದ್ದರಾಮಯ್ಯ ಗಟ್ಟಿಯಾಗಿದ್ದಾರೆ. ಅವರ ಕುರ್ಚಿಯು ಕೂಡ ಗಟ್ಟಿ ಇದೆ. ಆದರೆ ಈಗ ಅಲುಗಾಡುತ್ತಿರುವುದು ಬಿ ವೈ ವಿಜಯೇಂದ್ರ ಕುರ್ಚಿ ಎಂದು ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡುತ್ತಿದ್ದು ಆ ಕಾರಣದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಂಪುಟ ಸಭೆ ನಡೆಸಿದ್ದಾರೆ ಎಂಬ ವಿಜಯೇಂದ್ರ ಹೇಳಿಕೆಗೆ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಎಂ.ಬಿ.ಪಾಟೀಲ್, ಈಗ ಬಿ.ವೈ.ವಿಜಯೇಂದ್ರ ಕುರ್ಚಿ ಅಲುಗಾಡುತ್ತಿದೆ ಎಂದರು.
ಬಸನಗೌಡ ಪಾಟೀಲ್ ಯತ್ನಾಳ, ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕುರ್ಚಿ ಅಲಗಾಡುತ್ತಿದೆ ಹೀಗಾಗಿ ವಿಜಯೇಂದ್ರ ಮೊದಲು ತಮ್ಮ ಕುರ್ಚಿ ಕಟ್ಟಿ ಮಾಡಿಕೊಳ್ಳಲಿ ಎಂದು ಅವರು ತಿರುಗೇಟು ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


