ರಾಯಚೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡದಂತೆ ತಡೆದದ್ದು ನಾನೇ ಅಂತ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ನಗರದ ಅಂಬೇಡ್ಕರ್ ವೃತ್ತದಲ್ಲಿ ಇಂದು ಬಿಜೆಪಿಯಿಂದ ರಾಹುಲ್ ಗಾಂಧಿ ಅವರು ಎಸ್ಸಿ, ಎಸ್ಟಿ ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಕೇಂದ್ರದ ಮಂತ್ರಿಯಾಗಿದ್ದಾಗ ಅನಂತ್ ಕುಮಾರ್ ಸಂವಿಧಾನದ ಬದಲಾವಣೆ ಬಗ್ಗೆ ಮಾತನಾಡಿದ್ರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಾರ್ಲಿಮೆಂಟ್ ಕರೆಸಿ, ದೇಶದ ಕ್ಷಮೆ ಕೇಳುವಂತೆ ಹೇಳಿದ್ರು. ಮತ್ತೆ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ರು. ಅದಕ್ಕೆ ನಾನೇ ನಮ್ಮ ಮುಖಂಡರಿಗೆ ಖಡಕ್ ಆಗಿ, ಯಾವುದೇ ಕಾರಣಕ್ಕೂ ಟಿಕೆಟ್ ಕೊಡಬಾರದು ಅಂತ ಹೇಳಿದ್ದೆ. ನಮ್ಮ ಪಕ್ಷ ಅವರಿಗೆ ಟಿಕೆಟ್ ಕೊಡದೆ ತಿರಸ್ಕಾರ ಮಾಡಿಬಿಟ್ಟಿತು. ಇದು ನಮ್ಮ ಬದ್ಧತೆ. ಭಾರತೀಯ ಜನತಾ ಪಕ್ಷದ ತಾಕತ್ತು ಏನ್ ಅಂತ ತೋರಿಸಿ ಆಯ್ತು. ಈಗ ನಿಮ್ಮ ತಾಕತ್ತು ತೋರಿಸಿ ಎಂದು ಸವಾಲು ಹಾಕಿದರು.
ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಸಂಸದ ರಾಹುಲ್ ಗಾಂಧಿಯ ಅಣಕು ಶವಯಾತ್ರೆಯನ್ನು ನಡೆಸುವ ಮೂಲಕ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ, ಪ್ರತಿಭಟಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q