ಹೈದರಾಬಾದ್: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ನನ್ನು ಗೋವಾದಲ್ಲಿ ಬಂಧಿಸಲಾಗಿದೆ.
21 ವರ್ಷದ ಮಹಿಳಾ ನೃತ್ಯ ಸಂಯೋಜಕಿಯೊಬ್ಬರಿಗೆ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿದ್ದು, ಯುವತಿಯ ದೂರಿನ ನಂತರ ಜಾನಿ ಮಾಸ್ಟರ್ ತಲೆಮರೆಸಿಕೊಂಡಿದ್ದರು.
ಜಾನಿ ಮಾಸ್ಟರ್ ಹೈದರಾಬಾದ್ ನಲ್ಲಿರುವ ಸ್ನೇಹಿತನ ಮನೆಯಲ್ಲಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ 4 ತಂಡಗಳನ್ನ ಮಾಡಿ ಪೊಲೀಸರು ಹುಡುಕಾಟ ನಡೆಸಿದ್ದರು. ಅಂತಿಮವಾಗಿ ಗೋವಾದಲ್ಲಿ ಜಾನಿ ಮಾಸ್ಟರ್ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಇದೇ ರೀತಿಯ ಆರೋಪಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ಜಾನಿ ಮಾಸ್ಟರ್ 6 ತಿಂಗಳ ಕಾಲ ಜೈಲು ಸೇರಿದ್ದರು. ಇದೀಗ ಮತ್ತೆ ಅದೇ ಛಾಳಿ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q