ವಿಜಯವಾಡ: ಜಗನ್ ಮೋಹನ್ ರೆಡ್ಡಿ ಮುಖ್ಯಮಂತ್ರಿಯಾಗಿ ವೈಎಸ್‌ಆರ್‌ಸಿ ಆಳ್ವಿಕೆ ಇದ್ದಾಗ, ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ತಿರುಪತಿ ಲಡ್ಡು ತಯಾರಿಗೆ ಪರಿಶುದ್ಧ ತುಪ್ಪ ಬಳಸುವ ಬದಲು ಪ್ರಾಣಿ ಕೊಬ್ಬು ಬಳಸ್ತಾ ಇದ್ರು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.
ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ನೀಡಿರುವ ಹೇಳಿಕೆ ಭಾರಿ ಸಂಚಲನ ಸೃಷ್ಟಿಸಿದೆ.
ವೈಎಸ್ ಆರ್ ಸಿ ಸರ್ಕಾರ ತಿರುಮಲದಲ್ಲಿ ಅನ್ನ ಪ್ರಸಾದವಾಗಿ ಭಕ್ತರಿಗೆ ಕಳಪೆ ಆಹಾರವನ್ನು ನೀಡಿದ್ದಲ್ಲದೆ, ವೆಂಕಟೇಶ್ವರನಿಗೆ ಅರ್ಪಿಸುವ ಪ್ರಸಾದವನ್ನು ತಯಾರಿಸಲು ಕಳಪೆ ಗುಣಮಟ್ಟದ ಪದಾರ್ಥಗಳನ್ನು ಬಳಸಿದರು. ಶುದ್ಧ ತುಪ್ಪ ಬಳಸುವ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.
ಇಂದು ನಾವು ಪರಿಶುದ್ಧ ತುಪ್ಪವನ್ನು ಬಳಸುತ್ತಿದ್ದೇವೆ. ದೇವಾಲಯದ ವ್ಯವಸ್ಥೆಯನ್ನು ಶುದ್ಧೀಕರಿಸಿದ್ದೇವೆ. ಪ್ರಸಾದ ಮತ್ತು ಆಹಾರದ ಗುಣಮಟ್ಟ ಸುಧಾರಿಸಿದೆ. ಅದೇ ರೀತಿ ಮತ್ತಷ್ಟು ಸುಧಾರಣೆಗಳನ್ನು ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ನಾಯ್ಡು ವಿವರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q