ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರಥಮ ವರ್ಷದ ವಿವಿಧ ಸ್ನಾತಕ/ ಸ್ನಾತಕೋತ್ತರ ಪದವಿ ಕೋರ್ಸುಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪದವಿ ಪೂರ್ವ(10+2), ಸ್ನಾತಕ ಪದವಿ(10+2+3) ವಿದ್ಯಾರ್ಹತೆ ಹೊಂದಿರುವವರು ನವೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ.(ಜನರಲ್ ಅಂಡ್ ಐಟಿ), ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ಅಥವಾ ದೂರವಾಣಿ ಸಂಖ್ಯೆ: 0816- 2955580, 9844506629, 9886112434, 7349474339ನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕ ಡಾ.ಆರ್. ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q