ಹೆಚ್.ಡಿ.ಕೋಟೆ: ತಾಲೂಕು ವ್ಯವಸಾಯೋತ್ಪಾನ್ನ ಮಾರಾಟ ಸಹಕಾರ ಸಂಘದ ಸರ್ವಸದಸ್ಯರ 2023 ಮತ್ತು 2024 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಕ್ಕಿಗಿರಣಿ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವೇದಿಕೆಯ ಗಣ್ಯರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು. ಹಿಂದಿನ ಸಭೆಯ ನಡವಳಿಯನ್ನು ಸಂಘದ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎನ್.ಲಿಂಗರಾಜು ಸಭೆಗೆ ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಸದಸ್ಯ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಹೆಚ್.ಸಿ.ನರಸಿಂಹಮೂರ್ತಿ, ಸಂಘದಲ್ಲಿ ಪ್ರತಿ ಬಾರಿ ನಷ್ಟ ತೋರಿಸುವ ಬದಲು ಸಂಘವನ್ನು ಲಾಭದತ್ತ ಕೊಂಡೊಯ್ಯಬೇಕು ಎಂದು ತಿಳಿಸಿದರು
ನಂತರ ಮಾತನಾಡಿದ ವ್ಯವಸಾಯೋತ್ಪಾನ್ನ ಸಂಘದ ಅಧ್ಯಕ್ಷ ಮೊತ್ತ ಬಸವರಾಜಪ್ಪ, ಮುಂದಿನ ದಿನಗಳಲ್ಲಿ ಸಂಘವನ್ನು ಲಾಭದತ್ತ ತೆಗೆದುಕೊಂಡು ಹೋಗುತ್ತೇವೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷ ಬಸವರಾಜಪ್ಪ, ಉಪಾಧ್ಯಕ್ಷ ನೂರ್ ಮೊಹಮ್ಮದ್, ನಿರ್ದೇಶಕರುಗಳು, ಸಂಘದ ಸಿಬ್ಬಂದಿಗಳು, ಮುಖಂಡರಾದ, ಎಂ.ಮಹಾದೇವಪ್ರಸಾದ್, ಸಂತೋಷ, ಎಂ.ಡಿ.ಮಂಚಯ್ಯ, ಸರ್ವಸದಸ್ಯರು ಹಾಜರಿದ್ದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q