ಗಾಂಧಿನಗರ: 6 ವರ್ಷದ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಶಿಕ್ಷಕನೊಬ್ಬ ತನ್ನ ಕೃತ್ಯ ವಿಫಲವಾದಾಗ ಆಕ್ರೋಶಗೊಂಡು ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಜರಾತ್ನ ದಾಹೋದ್ ಜಿಲ್ಲೆಯ ಸಿಂಗ್ವಾಡ್ ಗ್ರಾಮದಲ್ಲಿ ನಡೆದಿದೆ.
ಸಿಂಗ್ವಾಡ್ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕ ಗೋವಿಂದ್ ನಾಥ್ ಎಂಬಾತ ಈ ದುಷ್ಕೃತ್ಯ ನಡೆಸಿದ್ದಾನೆ. ಅನುಮಾನದ ಮೇರೆಗೆ ಪೊಲೀಸರು ಶಿಕ್ಷಕನನ್ನು ವಶಕ್ಕೆ ಪಡೆದು ವಿಚಾರಿಸಿದ ವೇಳೆ ಆರೋಪಿ ತಾನೇ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.
ಗೋವಿಂದ್ ನಾಥ್ ಕಾರಿನಲ್ಲಿ ಹೋಗುತ್ತಿದ್ದಾಗ ಬಾಲಕಿ ನಡೆದುಕೊಂಡು ಹೋಗುತ್ತಿದ್ದಳು. ಕಾರು ನಿಲ್ಲಿಸಿ ಡ್ರಾಪ್ ಕೊಡುವುದಾಗಿ ಹೇಳಿದ್ದ ಶಿಕ್ಷಕ ದಾರಿ ಮಧ್ಯೆ ಲೈಂಗಿಕ ಕಿರುಕುಳ ನೀಡಲು ಮುಂದಾದ್ದಾನೆ. ಈ ವೇಳೆ ಬಾಲಕಿ ಪ್ರತಿಭಟಿಸಿದ್ದಾಳೆ. ಕಿರುಚಾಡಲು ಯತ್ನಿಸಿದ್ದಾಳೆ. ಈ ವೇಳೆ ಶಿಕ್ಷಕ ಬಾಲಕಿಯ ಬಾಯಿ ಮೂಗು ಬಲವಾಗಿ ಮುಚ್ಚಿ ಹಿಡಿದುಕೊಂಡಿದ್ದಾನೆ. ಈ ವೇಳೆ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ.
ಶಾಲೆ ಮುಗಿಯುವವರೆಗೂ ಬಾಲಕಿಯ ಮೃತದೇಹ ಕಾರಿನಲ್ಲೇ ಇಟ್ಟಿದ್ದ ಶಿಕ್ಷಕ ಬಳಿಕ ಶಾಲಾ ಆವರಣದಲ್ಲಿ ಎಸೆದು ಆಕೆಯ ಚಪ್ಪಲಿ, ಬ್ಯಾಗ್ ತರಗತಿಯಲ್ಲಿ ಎಸೆದಿದ್ದ.
ಪೊಲೀಸರು ವಿಚಾರಣೆ ನಡೆಸಿದ ವೇಳೆ ಇತರ ವಿದ್ಯಾರ್ಥಿಗಳು ಬಾಲಕಿ ಶಾಲೆಗೆ ಬಂದಿರಲಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ತೀವ್ರ ವಿಚಾರಣೆ ನಡೆಸಿದ ವೇಳೆ ಮುಖ್ಯಶಿಕ್ಷಕ ಗೋವಿಂದ್ ನಾಥ್ ಕೃತ್ಯ ನಡೆಸಿರುವುದು ಬೆಳಕಿಗೆ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q