ಬೆಂಗಳೂರು: ವಯ್ಯಾಲಿಕಾವಲ್ ಬಸಪ್ಪಗಾರ್ಡನ್ ನ ಮಹಾಲಕ್ಷ್ಮಿ ಹತ್ಯೆ ಪ್ರಕರಣದಲ್ಲಿ ಮಹತ್ವದ ಮಾಹಿತಿ ದೊರೆತಿದ್ದು, ಶೀಘ್ರವೇ ಆರೋಪಿಗಳನ್ನ ಬಂಧಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆಯಲ್ಲಿ ಒಬ್ಬರಿದ್ದಾರೋ, ಇಬ್ಬರಿದ್ದಾರೋ ಗೊತ್ತಿಲ್ಲ. ಆದರೆ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಿದ್ದೇವೆ ಎಂದು ಅವರು ಹೇಳಿದರು.
ಇನ್ನೂ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿಯವರು ರಾಜ್ಯಪಾಲರಿಗೆ ದೂರು ನೀಡುವುದನ್ನು ಬೇಡ ಎನ್ನಲಾಗುವುದಿಲ್ಲ. ಆದರೆ ಅವರು ಮಾಡಿರುವ ಆರೋಪದ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಇದೇ ವೇಳೆ ತಿಳಿಸಿದರು.
ಯಾದಗಿರಿ ಪಿಎಸ್ ಐ ಪರಶುರಾಮ್ ಅವರ ಕುಟುಂಬಕ್ಕೆ ವಿಮೆ ಆಧರಿಸಿ 25 ಲಕ್ಷ ರೂ.ಗಳ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅವರ ಪತ್ನಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ತಮಗೆ ಬೇರೆ ಇಲಾಖೆಯಲ್ಲಿ ಕೆಲಸ ಕೊಡಿಸುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅದರ ಕುರಿತು ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


