ಆಂಧ್ರಪ್ರದೇಶ: ತಿರುಪತಿ ಲಡ್ಡು ಅಪವಿತ್ರಗೊಂಡಿರುವ ಹಿನ್ನೆಲೆ ಇಂದು ದೇವಸ್ಥಾನದ ಶುದ್ಧೀಕರಣ ಕಾರ್ಯ ನಡೆಯಿತು. ತಿರುಪತಿ ತಿರುಮಲ ಆಡಳಿತ ಮಂಡಳಿಯು ರಾಮಕೃಷ್ಣ ದೀಕ್ಷಿತ್ ನೇತೃತ್ವದಲ್ಲಿ ಹೋಮ ನಡೆಯಿತು.
ವಾಸ್ತು ಶುದ್ಧಿ, ಯಂತ್ರ ಶುದ್ಧಿ, ಸ್ಥಳ ಶುದ್ಧಿ , ಪಂಚಗವ್ಯ ಸಂಪ್ರೋಕ್ಷಣ ಮೂಲಕ, ಅನ್ನ ಪ್ರಸಾದ ತಯಾರಾಗುವ ಸ್ಥಳ, ಲಡ್ಡು ತಯಾರಾಗುವ ಸ್ಥಳ, ತುಪ್ಪ ಬಳಸುತ್ತಿದ್ದ ಎಲ್ಲಾ ಸ್ಥಳಗಳಲ್ಲಿ ಪಂಚಗವ್ಯ ಸಂಪ್ರೋಕ್ಷಣೆ ನಡೆಸುವ ಮೂಲಕ ತಿಮ್ಮಪ್ಪನ ಭಕ್ತರಿಗೆ ನಂಬಿಕೆ ಮೂಡಿಸಲಾಯಿತು.
ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಡ್ಡು ಅಪವಿತ್ರ ವಿಚಾರಕ್ಕೆ ಸಂಬಂಧಿಸಿದಂತೆ ತುಪ್ಪ ಖರೀದಿಗೆ ಇದ್ದ ನಿಯಮಗಳ ಬದಲಾವಣೆ ಸೇರಿದಂತೆ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಲಾಗುವುದು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q