ಬೆಂಗಳೂರು: ರಾತ್ರಿ ಪಾಳಯ ಮಾಡುವ ಮಹಿಳಾ ವೈದ್ಯರ ಜೊತೆ ಒಬ್ಬ ಮಹಿಳಾ ಪ್ಯಾರಾ ಮೆಡಿಕಲ್, ಶುಶ್ರೂಷಕಿ ಅಥವಾ ಡಿ ಗ್ರೂಪ್ ನೌಕರರನ್ನು ನಿಯೋಜನೆಗೊಳಿಸುವುದು ಕಡ್ಡಾಯ ಎಂದು ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಹೊಸ ನಿಯಮಗಳ ಸುತ್ತೋಲೆಯನ್ನು ಹೊರಡಿಸಿದೆ.
ಇತ್ತೀಚೆಗೆ ಕೋಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ರೇಪ್ ಆಂಡ್ ಮರ್ಡರ್ ಕೇಸ್ ನಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಈ ಹೊಸ ನಿಯಮ ಜಾರಿ ಮಾಡಿದೆ ಎಂದು ಹೇಳಲಾಗಿದೆ.
ಕೋಲ್ಕತ್ತಾ ವೈದ್ಯೆಯ ಪ್ರಕರಣದ ಬಳಿಕ ರಾಜ್ಯದಲ್ಲೂ ಟ್ರೈನಿ ವೈದ್ಯೆಯರ ಸಂಕಷ್ಟಗಳ ಬಗ್ಗೆ ಹಲವು ದೂರುಗಳು ಬಂದಿದ್ದವು. ಹೀಗಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವೈದ್ಯೆಯರಿಗೆ ಹೊಸ ನಿಯಮಗಳನ್ನು ಜಾರಿಗೊಳಿಸುವುದಾಗಿ ಹೇಳಿದ್ದರು.
ಅದರಂತೆ ಈಗ ಹೊಸ ನಿಯಮ ಜಾರಿಗೆ ತರಲಾಗಿದೆ. ಕೇವಲ ಸರ್ಕಾರೀ ಆಸ್ಪತ್ರೆಗಳು ಮಾತ್ರವಲ್ಲ, ಖಾಸಗಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳಿಗೂ ಈ ನಿಯಮ ಅನ್ವಯವಾಗಲಿದೆ.
ಹೀಗಿದೆ ಹೊಸ ನಿಯಮ:
* ಸಾರ್ವಜನಿಕರ, ರೋಗಿಗಳ ಸಂಬಂಧಿಗಳಿಗೆ ಕಡ್ಡಾಯ ಗುರುತಿನ ಚೀಟಿ.
* ರಾತ್ರಿ 12 ರಿಂದ ಮುಂಜಾನೆ 4 ಗಂಟೆಯವರೆಗೆ ಪೊಲೀಸರಿಂದ ಗಸ್ತು.
* ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಆಸ್ಪತ್ರೆಗಳಿಗೆ ಸಿಬ್ಬಂದಿ ನಿಯೋಜಿಸುವ ಕುರಿತು ಸುತ್ತೋಲೆಯಲ್ಲಿ ಆದೇಶ ಹೊರಡಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


