nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ
    • ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಾಜ್ಯ ಹಿರಿಯ ನಾಗರೀಕರ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆ ಸಂಪನ್ನ
    ತುಮಕೂರು September 25, 2024

    ಕರ್ನಾಟಕ ರಾಜ್ಯ ಹಿರಿಯ ನಾಗರೀಕರ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆ ಸಂಪನ್ನ

    By adminSeptember 25, 2024No Comments2 Mins Read

    ತುಮಕೂರು: ಕರ್ನಾಟಕ ರಾಜ್ಯ ಹಿರಿಯ ನಾಗರೀಕರ ಸಂಘ, ಬೆಳಗಾವಿಯಲ್ಲಿ ಕೇಂದ್ರ ಕಛೇರಿ ಹೊಂದಿದ್ದು, 2024-25ನೇ ಸಾಲಿನ ಸರ್ವಸದಸ್ಯರ ಸಭೆಯನ್ನು ತುಮಕೂರು ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ಹಿರಿಯ ನಾಗರೀಕರ ಜಿಲ್ಲಾ ಸಂಘದ ಸಹಯೋಗದಲ್ಲಿ ನಡೆಸಲಾಯಿತು.

    ಸಮಾರಂಭವನ್ನು ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಮಲ್ಲಪ್ಪ ಮುದಕವಿ ಅವರು ಉದ್ಘಾಟಿಸಿದರು.


    Provided by
    Provided by

    ಸಂಘದ ಅಧ್ಯಕ್ಷರಾದ ಎ.ವೈ. ಬೆಂಡಿಗೇರಿಯವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯ ನಾಗರೀಕರ ಸಂಘದ ವಾರ್ಷಿಕ ಸರ್ವಸದಸ್ಯರ ಸಭೆಯನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸುವುದರಿಂದ ಪರಸ್ಪರ ಸಂಬಂಧ-ಸಂಪರ್ಕಗಳು ಬೆಳೆದು ಸಂಘದ ಉನ್ನತಿಗಾಗಿ ಕೆಲಸ ಮಾಡಲು ಪ್ರೇರಣೆ ದೊರಕುತ್ತದೆ ಎಂದರು. ಸದಸ್ಯರನ್ನು ಹೆಚ್ಚಿಸಿಕೊಂಡು ಹಿರಿಯ ನಾಗರೀಕರಿಗೆ ಅಗತ್ಯವಿರುವ ಎಲ್ಲ ಬಗೆಯ ಸಹಾಯ ಸಹಕಾರ ನೀಡುವುದು, ಸರಕಾರದ ಯೋಜನೆಗಳನ್ನು ಹಿರಿಯ ನಾಗರೀಕರಿಗೆ ತಲುಪುವಂತೆ ಮಾಡುವುದು, ಜಿಲ್ಲಾ ಸಂಘಗಳು ಸರ್ವಿಸ್ ಸೆಂಟರ್ ಪ್ರಾರಂಭಿಸಿ ಅದರ ಮೂಲಕ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ದೊರೆಯುವಂತೆ ಮಾಡಬಹುದು ಎಂದರು.

    ಇದೇ ವೇಳೆ ಖಜಾಂಚಿಯವರಾದ ಸುರೇಶ್ ಪಿ. ಭಜಂತ್ರಿ ಅವರು ಆಡಿಟ್ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು.

    ತುಮಕೂರು ಜಿಲ್ಲಾ ನಿವೃತ್ತ ನೌಕರರ ಹಾಗೂ ಹಿರಿಯ ನಾಗರೀಕರ ಸಂಘದ ಅಧ್ಯಕ್ಷರಾದ ಬಾ.ಹ. ರಮಾಕುಮಾರಿ ಅವರು ವಿಶ್ರಾಂತಿ ವೇತನದಾರರಲ್ಲದ ಹಿರಿಯ ನಾಗರೀಕರು ಬಹುತೇಕ ಜನ ಅತ್ಯಂತ ದುಃಸ್ಥಿತಿಯಲ್ಲಿದ್ದಾರೆ. ಸುಸ್ಥಿತಿಯಲ್ಲಿರುವ ಹಿರಿಯರನ್ನೇ ಮಕ್ಕಳು ಮತ್ತು ಕುಟುಂಬದವರು ನೋಡಿಕೊಳ್ಳದೇ ವೃದ್ಧಾಶ್ರಮಕ್ಕೆ ಅಟ್ಟುತ್ತಿದ್ದಾರೆ. ಅನೇಕರು ಬೀದಿಪಾಲಾಗುತ್ತಿದ್ದಾರೆ. ಇವರಿಗೆ ಆಸರೆಯಾಗಲು ಹಿರಿಯ ನಾಗರೀಕರ ಇಲಾಖೆ ಮತ್ತು ಪಾಲನೆ ಪೋಷಣೆ ಕಾನೂನುಗಳನ್ನು ಬಲಪಡಿಸಬೇಕಾಗಿದೆ. ಈ ದಿಕ್ಕಿನಲ್ಲಿ ಜಿಲ್ಲಾ ಸಂಘ ಸತತ ಪ್ರಯತ್ನಿಸುತ್ತಿದೆ. ಜನಪ್ರತಿನಿಧಿಗಳು ಮತ್ತು ಸರ್ಕಾರದ ಅಧಿಕಾರಿಗಳು ನಮಗೆ ಸ್ಪಂದಿಸಬೇಕಿದೆ ಎಂದರು.

    ತುಮಕೂರು ಜಿಲ್ಲೆಯಲ್ಲಿ ಜಿಲ್ಲಾ ಘಟಕ 07—01–2024 ರಂದು  ಸಹಕಾರ ಸಚಿವರಾದ ಕೆ.ಎನ್. ರಾಜಣ್ಣ, ತುಮಕೂರು ನಗರ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಮತ್ತು ತುಮಕೂರು ಮಹಾನಗರಪಾಲಿಕೆ ಆಯುಕ್ತರಾದ ಆಶ್ವೀಜಾ ಅವರುಗಳಿಂದ ಉದ್ಘಾಟನೆಗೊಂಡಿದ್ದು ಕಾರ್ಯಾರಂಭ ಮಾಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗುವಂತೆ ವಿನಂತಿಸಿದರು.

    ತುಮಕೂರು ಜಿಲ್ಲಾ ಘಟಕದ ವತಿಯಿಂದ ರಾಜ್ಯ ಅಧ್ಯಕ್ಷರಿಗೆ ಮನವಿ ಸಲ್ಲಿಸಿ ಕೆಳಕಂಡ ಬೇಡಕೆಗಳನ್ನು ಈಡೇರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಬೇಕೆಂದು ಕೋರಿದರು.

    1. ಪೆನ್ಷನ್ ಹಣವನ್ನು ಆದಾಯ ತೆರಿಗೆಗೆ ಒಳಪಡಿಸದಂತೆ ತಿದ್ದುಪಡಿ ತರುವುದು.
    2. ರೈಲು ಪ್ರಯಾಣದಲ್ಲಿ ಹಿರಿಯ ನಾಗರೀಕರಿಗೆ ಹಿಂದೆ ಇದ್ದಂತೆ ರಿಯಾಯಿತಿ ಜಾರಿಗೆ ತರುವುದು.
    3. ಎಲ್ಲ ವೇಗದ ರೈಲುಗಳಲ್ಲಿಯೂ ಹಿರಿಯ ನಾಗರೀಕರಿಗೆ ಪ್ರತ್ಯೇಕ ಬೋಗಿ ಅಳವಡಿಸುವುದು.
    4. ಪ್ರತೀ ದೊಡ್ಡ ರೈಲುನಿಲ್ದಾಣದಲ್ಲಿ ಹಿರಿಯ ನಾಗರೀಕರಿಗಾಗಿ ಸಹಾಯ ಕೇಂದ್ರ ಸ್ಥಾಪಿಸುವುದು.
    5. ರೈಲು ನಿಲ್ದಾಣಗಳಲ್ಲಿ ಚಿಕ್ಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವುದು.

    ನಿವೃತ್ತ ಶಿಕ್ಷಕಿ ಲೀಲಾವತಿ ಅವರು ಪ್ರಾರ್ಥಿಸಿದರು. ನಿವೃತ್ತ ಸಂಘದ ಪ್ರಧಾನ ಕಾರ್ಯದರ್ಶಿ ಪುಟ್ಟನರಸಯ್ಯ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಣೆ ಮಾಡಿದರು.

    ವೇದಿಕೆಯಲ್ಲಿ ದಾವಣಗೆರೆ ಜಿಲ್ಲಾ ಅಧ್ಯಕ್ಷರಾದ ಕುಸುಮಶೆಟ್ಟರು, ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ರಂಗಪ್ಪರೆಡ್ಡಿ, ಅನಂತರಾಮಯ್ಯ, ರಾಜ್ಯ ಉಪಾಧ್ಯಕ್ಷರಾದ ಕೆ.ಎಂ. ಚಂದ್ರಶೇಖರ್, ವಿ. ಲಕ್ಷ್ಮೀನಾರಾಯಣ ಮುಂತಾದವರು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ಕೊರಟಗೆರೆ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆಗಳನ್ನು ನಡೆಸಲು ಟಾಟಾ ಪವರ್ ಸೇರಿದಂತೆ ಯಾವುದೇ ಖಾಸಗಿ ಕಂಪನಿಗಳಿಗೆ ಅನುಮತಿ ನೀಡಬಾರದು ಎಂದು…

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.