ಪಾವಗಡ: ಅಜಿಂ ಪ್ರೇಮ್ ಜೀ ಅವರ ಪೌಂಡೇಶನ್ ವತಿಯಿಂದ ಕರ್ನಾಟಕದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಾರದ 4 ದಿನಗಳು ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ತಾಲ್ಲೂಕು ಮಟ್ಟದಲ್ಲಿ ಶಾಸಕರಾದ ಹೆಚ್.ವಿ.ವೆಂಕಟೇಶ್ ರವರು ಮರಿದಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ಮರಿದಾಸನಹಳ್ಳಿ ಸರ್ಕಾರಿ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಮಾಡಲು ಈಗಾಗಲೇ ಪ್ರಸ್ಥಾವನೆಯನ್ನು ಸಲ್ಲಿಸಿ ಶಿಪಾರಸ್ಸು ಮಾಡಲಾಗಿದೆ. ಶೀಘ್ರದಲ್ಲೆ ಈ ಶಾಲೆ ಕೆ.ಪಿ.ಎಸ್. ಶಾಲೆಯಾಗಲಿದೆ ಎಂದರು.
ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗೆಲುವು ಸಾದಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಬಿ.ಆರ್.ಸಿ ಜಿ.ವೆಂಕಟೇಶ್, ಅಕ್ಷರ ದಾಸೋಹ ನಿರ್ದೇಶಕರಾದ ಶಂಕರಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಮ್ಮ, ಸಿಆರ್ ಪಿ ನರೇಂದ್ರ ನಾಯ್ಕ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಉಮಾದೇವಿ , ಪ್ರೌಢ ಶಾಲಾ ಮುಖ್ಯಶಿಕ್ಷಕ ರಾಜಗೋಪಾಲ್, ಪ್ರಾಂಶುಪಾಲರಾದ ಜಿ.ಎನ್.ಅಂಜಿನೇಯಲು, ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q