ತುಮಕೂರು: ಸೆನ್ ಮತ್ತು ಪಾವಗಡ ಪೋಲಿಸರ ಜಂಟಿ ಕಾರ್ಯಾಚರಣೆಯಲ್ಲಿ ಬಿಲ್ಲೆ ಆಟದಲ್ಲಿ ನಿರತರಾಗಿದ್ದ 32 ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪಾವಗಡ ತಾಲೂಕಿನ ಕಸಬಾ ಹೋಬಳಿಯ ಗುಮ್ಮಘಟ್ಟ ಗ್ರಾಮದ ಸಮೀಪದ ಆಂಧ್ರ ಗಡಿಯಲ್ಲಿ ಬಿಲ್ಲೆ ಆಟ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ತುಮಕೂರಿನ ಸೆನ್ ಮತ್ತು ಪಾವಗಡ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ 18 ಬೈಕ್ ಗಳು 2.27 ಲಕ್ಷ ಮೊತ್ತದ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಾರ್ಯಾಚರಣೆಯು ತುಮಕೂರು ಎಸ್ಪಿ ಅಶೋಕ ಕೆ.ವಿ. ಅವರ ಮಾರ್ಗದರ್ಶನದಲ್ಲಿ ತುಮಕೂರು ಸೆನ್ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರಸನ್ನಕುಮಾರ್ ಪಾವಗಡ ಪೊಲೀಸ್ ಠಾಣೆಯ ಸಿಪಿಐ ಸುರೇಶ್ ದಾಳಿ ನಡೆಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296