ಹುಬ್ಬಳ್ಳಿ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸಲು ತಂದಿದ್ದ ಲ್ಯಾಪ್ ಟಾಪ್ ಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಮಬಂಧಿಸಿದಂತೆ 26 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ಮಿಕರ ಮಕ್ಕಳಿಗೆ ವಿತರಿಸಲು 101 ಲ್ಯಾಪ್ಟಾಪ್ ಗಳನ್ನು ಇಲಾಖೆಯ ಕಚೇರಿಯಲ್ಲಿ ತಂದಿಡಲಾಗಿತ್ತು. ಆದರೆ, ತಂದಿಡಲಾಗಿತ್ತು. ಆದರೆ ತಂದಿಡಲಾಗಿದ್ದ ಲ್ಯಾಪ್ ಟಾಪ್ ಗಳನ್ನು ಕಳವು ಮಾಡಿರುವ ಬಗ್ಗೆ ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತರು ದೂರು ನೀಡಿದ್ದರು.
ಈ ದೂರಿನನ್ವಯ ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳೆ ಹುಬ್ಬಳ್ಳಿ ಠಾಣೆ ಇನ್ಸ್ ಪೆಕ್ಟರ್ ಸುರೇಶ್ ಹುಳ್ಳೂರ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
55 ಲಕ್ಷ ರೂಪಾಯಿ ಮೌಲ್ಯದ ಹೆಚ್.ಪಿ. ಕಂಪನಿಯ ಲ್ಯಾಪ್ಟಾಪ್ ಗಳು ಕಳವು ಮಾಡಲಾಗಿತ್ತು. ಕಚೇರಿಯ ಕಿಟಕಿಯಿಂದ ಇಳಿದು ಲ್ಯಾಪ್ ಟಾಪ್ ಗಳನ್ನು ಕಳವು ಮಾಡಲಾಗಿತ್ತು.
ಬಳಿಕ ಕಳವು ಮಾಡಿದ ಲ್ಯಾಪ್ ಟಾಪ್ ಗಳನ್ನು ಮಾರಾಟ ಮಾಡಲಾಗಿತ್ತು. ಇನ್ನುಳಿದ 16 ಮಂದಿ ಲ್ಯಾಪ್ಟಾಪ್ ಕಳ್ಳತನಕ್ಕೆ ಪ್ರೇರಣೆ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇಲಾಖೆಯ 6 ಜನ ಸಿಬ್ಬಂದಿ ಸೇರಿ 26 ಜನರನ್ನು ಬಂಧಿಸಲಾಗಿದೆ. 83 ಲ್ಯಾಪ್ಟಾಪ್ ಗಳು, ಎರಡು ಆಟೋ, ಎರಡು ಬೈಕ್, ಒಂದು ಕಾರ್ ವಶಕ್ಕೆ ಪಡೆಯಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296