ದಾವಣಗೆರೆ: ಸಂಕ್ರಾಂತಿಯ ದಿನದಂದೇ ಜವರಾಯ ಅಟ್ಟಹಾಸ ಮೆರೆದಿದ್ದು, ಬೆಳ್ಳಂ ಬೆಳಗ್ಗೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕು ಬಳಿ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಕಾನನಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ ಈ ಘಟನೆ ನಡೆದಿದ್ದು ರಸ್ತೆ ವಿಭಜಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ,
ಆರು ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ದಾವಣಗೆರೆ ಎಸ್ಪಿ ಸಿಬಿ ರಿಷ್ಯಂತ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಾವನ್ನಪ್ಪಿದವರು ಯಾದಗಿರಿ ಜಿಲ್ಲೆಯ ಶಾಹಾಪುರ ನಿವಾಸಿಗಳು ಎನ್ನಲಾಗಿದೆ. ಬೆಂಗಳೂರಿನಿಂದ ಹೊಸಪೇಟೆ ಕಡೆ ಹೋಗುತ್ತಿದ್ದ ವೇಳೆ ದುರಂತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಸುಕಿನ ಜಾವ ಕಾರು ಚಾಲಕ ನಿದ್ದೆಮಂಪರಿನಲ್ಲಿದ್ದು, ಡಿವೈಡರ್ ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy