ನಟ ದರ್ಶನ್ ಅವರ ಜಾಮೀನು ಅರ್ಜಿ ಸೋಮವಾರ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದಸರಾ ಸಂದರ್ಭದಲ್ಲಿ ದರ್ಶನ್ ಗೆ ಜಾಮೀನು ಸಿಗುತ್ತಾ? ಎನ್ನುವ ನಿರೀಕ್ಷೆ ಅಭಿಮಾನಿಗಳಲ್ಲಿ ಮೂಡಿದೆ.
ಸೆಪ್ಟೆಂಬರ್ 27ರಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಬೇಕಿತ್ತು, ಆದರೆ ದರ್ಶನ್ ಪರ ಹಿರಿಯ ವಕೀಲರು ಕೋರ್ಟ್‌ಗೆ ಹಾಜರಾಗದ ಕಾರಣ, ವಿಚಾರಣೆ ಮುಂದೂಡುವಂತೆ ಸಹಾಯಕ ವಕೀಲರು ಮನವಿ ಮಾಡಿದ್ದರಿಂದ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 30 ಕ್ಕೆ ಮುಂದೂಡಲಾಗಿತ್ತು.
ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಪಾತ್ರವಿಲ್ಲ ಮತ್ತು ದರ್ಶನ್ ತನಿಖೆಗೆ ಸಹಕಾರ ನೀಡುತ್ತಿದ್ದಾರೆ. ಪೊಲೀಸರು ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೀಗಾಗಿ ದರ್ಶನ್ ಸಾಕ್ಷಿ ನಾಶ ಮಾಡಲು ಯಾವುದೇ ಅವಕಾಶವಿಲ್ಲ ಎನ್ನುವ ವಾದವನ್ನು ದರ್ಶನ್ ವಕೀಲರು ಕೋರ್ಟ್ ಮುಂದಿರುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ.
ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಅವರನ್ನು ಭೇಟಿಯಾಗಿ ಹಲವಾರು ಬಾರಿ ಮಾತುಕತೆ ನಡೆಸಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಲಭಿಸಿದ ಹಿನ್ನೆಲೆ ನಟ ದರ್ಶನ್ ಗೆ ಕೂಡ ಷರತ್ತು ಬದ್ಧ ಜಾಮೀನು ಸಿಗುವ ನಿರೀಕ್ಷೆ ಸೃಷ್ಟಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


