ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿಯ ಸೊರವನಹಳ್ಳಿ, ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಟಿ.ಬಿ.ಕ್ರಾಸ್ ಮಾಯಸಂದ್ರ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಹಾಗೂ ರಸ್ತೆ ಅಗಲೀಕರಣ ಕಾಮಗಾರಿಗೆ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಸಾಲ ಜಯರಾಮ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಕಾಮಗಾರಿಯ ಅಂದಾಜು ವೆಚ್ಚ 1.25ಕೋಟಿ ಗಳದ್ದಾಗಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಈ ರಸ್ತೆ ಕಿರಿದಾಗಿದೆ. ಹೀಗಾಗಿ ರಸ್ತೆ ಅಗಲೀಕರಣ ಹಾಗೂ ಚರಂಡಿ ವ್ಯವಸ್ಥೆ ಅನಿವಾರ್ಯವಾಗಿದೆ. ವಾಹನ ಸವಾರರು ಹಾಗೂ ಪಾದಚಾರಿಗಳ ಹಿತದೃಷ್ಟಿಯಿಂದ ರಸ್ತೆಯ ಎರಡೂ ಬದಿಯ ಚರಂಡಿ ಅಗಲೀಕರಣ ಅಗತ್ಯವಾಗಿದೆಎ ಎಂದರು.
ಟಿ.ಬಿ.ಕ್ರಾಸ್ ನ ಅಂಗಡಿಯ ಮಾಲೀಕರು ಹಾಗೂ ಸಾರ್ವಜನಿಕರು ಮತ್ತು ಕ್ಷೇತ್ರದ ಮತದಾರ ಪ್ರಭುಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ, ಈ ರಸ್ತೆ ಕಾಮಗಾರಿ ಯಶಸ್ವಿಯಾಗಿ ನಡೆಯಲು ಸಹಕರಿಸಿ ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ,ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷರಾದ ಕೊಂಡಜ್ಜಿ ವಿಶ್ವನಾಥ್, ಮುನಿಯೂರು ಗ್ರಾಮ ಪಂಚಾಯಿತಿ ಸದಸ್ಯರಾದ ಕಾಲಂಜಿಹಳ್ಳಿ, ತುರುವೇಕೆರೆ ಪಟ್ಟಣ ಪಂಚಾಯಿತಿ ಸದಸ್ಯರಾದ ಅಂಜನ್ ಕುಮಾರ್, ಸದಸ್ಯ ಚಿದಾನಂದ್ , ಬಿ.ಜೆ.ಪಿ.ಪಕ್ಷದ ವಕ್ತಾರ ಗೊಟ್ಟಿಕೆರೆ ವಕೀಲಮುದ್ದೇಗೌಡ್ರು, ಸೊರವನ ಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ, ಹೊಣಕೆರೆ ಸಂದೇಶ್, ಸದಸ್ಯ ನಾಗೇಶ್, ಮುಖಂಡ, ಹೊಣಕೆರೆ ಗೊಲ್ಲರಹಟ್ಟಿಯ ಕೃಷ್ಣ ಸ್ವಾಮಿ, ಮುಖಂಡ ಕೆ.ಟಿ.ಗೋವಿಂದರಾಜು ಮೊದಲಾದವರು ಹಾಜರಿದ್ದರು.
ವರದಿ: ಸುರೇಶ್ ಬಾಬು.ಎಂ. ನಮ್ಮ ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy