ತುಮಕೂರು: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಹಂದಿಗೆ ಹೋಲಿಸಿ ನೀಡಿರುವ ಹೇಳಿಕೆ ವಿರುದ್ಧ ಶಿರಾ ಜೆಡಿಎಸ್ ತಾಲೂಕು ಜೆಡಿಎಸ್ ಅಧ್ಯಕ್ಷ ಸತ್ಯ ಪ್ರಕಾಶ್, ಜೆಡಿಎಸ್ ಹಿರಿಯ ಮುಖಂಡ ಆರ್. ಉಗ್ರೇಶ್ , ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್.ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ರವರನ್ನು ತಕ್ಷಣ ಅಮಾನತು ಮಾಡಬೇಕು, ಮೂಡ ಹಗರಣದಲ್ಲಿ ಭಾಗಿಯಾಗಿರುವ ಭ್ರಷ್ಟ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಪ್ರತಿಭಟನಾಕಾರರು, ತಹಶೀಲ್ದಾರ್ ಸಚ್ಚಿದಾನಂದ ಈಚನೂರ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮುದಮಡು ರಂಗಸ್ವಾಮಿ, ನಗರಸಭೆ ಮಾಜಿ ಅಧ್ಯಕ್ಷ ಅಂಜಿನಪ್ಪ, ಸದಸ್ಯ ರಾಮು, ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಡಿ. ಮಲ್ಲೇಶ್ , ಮೇಲ್ಕುಂಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ.ಡಿ. ನರಸಿಂಹಮೂರ್ತಿ, ಮುಖಂಡರಾದ ರಹಮತುಲ್ಲಾ ಖಾನ್, ಲಕ್ಕನಹಳ್ಳಿ ಮಂಜುನಾಥ್, ಬಪ್ಪ ರಾಯಪ್ಪ, ಹುಂಜಿಜಿನಾಳ ರಾಜಣ್ಣ, ರೇಣುಕಮ್ಮ, ಲಲಿತಮ್ಮ, ಮುದ್ದು ಗಣೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ನರಸಿಂಹ ಗೌಡ, ಉದಯ ಕುಮಾರ್, ಕೊಟ್ಟ ಶಿವಣ್ಣ, ಸುರೇಶ್, ನಾಗರಾಜು ಸೇರಿದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಸರ್ಕಾರ ತಕ್ಷಣ ಅಮಾನತುಗೊಳಿಸುವಂತೆ ಘೋಷಣೆ ಕೂಗುತ್ತಾ ತಹಶೀಲ್ದಾರ್ ಕಚೇರಿಗೆ ಜೆಡಿಎಸ್ ಕಾರ್ಯಕರ್ತರು ಆಗಮಿಸಿ ಮನವಿ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q