ತುಮಕೂರು: ಇಂದು ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಅದ್ದೂರಿ ದಸರಾಕ್ಕೆ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು.
ಸಿದ್ದಗಂಗಾ ಮಠದ ಶ್ರಿ ಸಿದ್ದಲಿಂಗ ಸ್ವಾಮೀಜಿ ಕನ್ನಡ ಬಾವುಟವನ್ನು ಹಾರಿಸಿದರು. ಭವ್ಯ ಮಂಟಪದಲ್ಲಿ ನಾಡ ದೇವತೆ ಚಾಮುಂಡಿಯ ಪ್ರತಿಸ್ಠಾಪನೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಪತ್ನಿ ಕನ್ನಿಕಾ ಜೊತೆ ಡಾ.ಜಿ.ಪರಮೇಶ್ವರ್ ಪೂಜೆಯಲ್ಲಿ ಭಾಗಿಯಾದರು. ಈ ವೇಳೆ ಎಲೆರಾಂಪುರ ಮಠದ ಹನುಮಂತನಾಥ ಸ್ವಾಮೀಜಿಗಳ ದಿವ್ಯ ಸಾನಿಧ್ಯ ವಹಿಸಿದ್ದರು.
ಮೈಸೂರು ಅರಮನೆ ಹಾಗೂ ಚಾಮುಂಡಿ ದೇವಾಲಯ ಮಾದರಿಯಲ್ಲಿ ಶಿವಕುಮಾರ ಸ್ವಾಮೀಜಿ ಮಂಟಪ ನಿರ್ಮಾಣ ಮಾಡಲಾಗಿದೆ. ಇಂದಿನಿಂದ 9 ದಿನಗಳ ಕಾಲ ದಸರಾ ಕಾರ್ಯಕ್ರಮ ನಡೆಯಲಿದೆ.
ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಜ್ಯೋತಿಗಣೇಶ್, ಕೆ.ಷಡಕ್ಷರಿ ಸೇರಿ ಹಲವರು ಭಾಗಿಯಾಗಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


