nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ
    • ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಡರ್-19 ಬ್ಯಾಡ್ಮಿಂಟನ್: ನಂ.1 ಸ್ಥಾನ ಅಲಂಕರಿಸಿದ ಭಾರತದ ತಸ್ಮಿನ್ ಮೀರ್
    ರಾಷ್ಟ್ರೀಯ ಸುದ್ದಿ January 15, 2022

    ಅಂಡರ್-19 ಬ್ಯಾಡ್ಮಿಂಟನ್: ನಂ.1 ಸ್ಥಾನ ಅಲಂಕರಿಸಿದ ಭಾರತದ ತಸ್ಮಿನ್ ಮೀರ್

    By adminJanuary 15, 2022No Comments1 Min Read
    thasmin meer

    ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಅಂಡರ್ 19 ಬ್ಯಾಡ್ಮಿಂಟನ್ ಆಟಗಾರರ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಭಾರತದ ತಸ್ಮಿನ್ ಮಿರ್ ನಂಬರ್ 1 ಸ್ಥಾನವನ್ನು ಅಲಂಕರಿಸುವ ಮೂಲಕ ಈ ಸಾಧನೆ ಮಾಡಿದ ದೇಶದ ಮೊದಲ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

    16 ವರ್ಷದ ತಸ್ಮಿನ್ ಮೀರ್ ಒಟ್ಟು 10,810 ಪಾಯಿಂಟ್ಸ್ಗಳನ್ನು ಕಲೆ ಹಾಕುವ ಮೂಲಕ ಈ ಸಾಧನೆ ಮಾಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ತಸ್ಮಿನ್, ನಾನು ಪಂದ್ಯಗಳನ್ನು ಸೋತಾಗ ತುಂಬಾ ಅತ್ತಿದ್ದೇನೆ, ಆದರೆ ಕಠಿಣ ಪರಿಶ್ರಮದಿಂದಾಗಿ ನಾನು ಇಂದು ಈ ಸಾಧನೆ ಮಾಡಿದ್ದೇನೆ, ಬ್ಯಾಡ್ಮಿಂಟನ್ ಲೋಕದ ಮಹಾತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಒಲಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಅವರು ನನಗೆ ರೋಲ್ ಮಾಡೆಲ್ ಗಳಾಗಿದ್ದಾರೆ, ನನ್ನ ಈ ಪರಿಶ್ರಮಕ್ಕೆ ನನ್ನ ತಂದೆ ಹಾಗೂ ಸಹೋದರ ತ್ಯಾಗಭಾವವೂ ಕಾರಣವಾಗಿದೆ ಎಂದು ಅವರು ತಿಳಿಸಿದರು.

    ಹಿರಿಯ ಬ್ಯಾಡ್ಮಿಂಟನ್ ನಲ್ಲಿ ಯಾವ ರೀತಿ ಪ್ರದರ್ಶನ ನೀಡಬೇಕೆಂಬುದು ನನಗೆ ಗೊತ್ತಿಲ್ಲವಾದರೂ, ಮುಂದೊಂದು ದಿನ ಆ ವಿಭಾಗದಲ್ಲೂ ಉತ್ತಮ ಪ್ರದರ್ಶನ ತೋರುವ ಮೂಲಕ ಭಾರತಕ್ಕೆ ಒಲಿಂಪಿಕ್ಸ್ನಲ್ಲಿ ಪದಕವನ್ನು ತಂದುಕೊಡುತ್ತೇನೆ ಎಂಬ ಆತ್ಮವಿಶ್ವಾಸವನ್ನು ತಸ್ಮಿನ್ ವ್ಯಕ್ತಪಡಿಸಿದರು.

    ತಸ್ಮಿನ್ ರ ತಂದೆ ಇಫ್ರಾನ್ ಮಾತನಾಡಿ, ನನ್ನ ಮಗಳಿಗೆ 6 ವರ್ಷದ ವಯಸ್ಸಿನಿಂದಲೂ ಬ್ಯಾಡ್ಮಿಂಟನ್ ಬಗ್ಗೆ ಅಪಾರ ಒಲವಿತ್ತು, ಆದರೆ ಪ್ರಾಯೋಜಕರು ಸಿಗದ ಕಾರಣ ಬ್ಯಾಡ್ಮಿಂಟನ್ ಆಡುವುದನ್ನು ಬಿಟ್ಟು ಬಿಡು ಎಂದು ಹೇಳಿದ್ದೇವೆ, ಆದರೆ ಆಕೆಯ ಸತತ ಪರಿಶ್ರಮದ ಫಲದಿಂದಲೇ ಇಂದು ನಂಬರ್ 1 ಆಟಗಾರ್ತಿ ಆಗಿದ್ದಾಳೆ. ತಸ್ಮಿನ್ ಇದುವರೆಗೂ 22 ಸರಣಿಗಳಲ್ಲಿ ಗೆಲುವು ಸಾಧಿಸಿದ್ದು ಮುಂದೊಂದು ದಿನ ಭಾರತಕ್ಕೆ ಒಲಿಂಪಿಕ್ಸ್ ಪದಕ ಗೆದ್ದು ಕೊಡುತ್ತಾಳೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.

    ತಸ್ಮಿನ್ ಏಷ್ಯಾನ್ ಜೂನಿಯರ್ ಚಾಂಪಿಯನ್ಷಿಪ್ನಲ್ಲಿ ಅಂಡರ್ 15, ಅಂಡರ್ 17, 4 ಜೂನಿಯರ್ ಅಂತರರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಒಟ್ಟು 22 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.

    ವರದಿ:  ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: SCSP/TSP ನಿಧಿ ಸದ್ಬಳಕೆ ಕುರಿತು ಪಾವಗಡದಲ್ಲಿ ಜಾಗೃತಿ ಸಭೆ

    September 7, 2026

    ಪಾವಗಡ : SCSP/TSP ನಿಧಿಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ SCSP/TSP ನಿಧಿ ಸದ್ಬಳಕೆ…

    ಪಾವಗಡ: ದೇವರಹಟ್ಟಿಯಲ್ಲಿ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    September 7, 2026

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.