ಮಿರ್ಜಾಪುರ: ಟ್ರಾಕ್ಟರ್ ಟ್ರಾಲಿ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 10 ಜನರು ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಇದು ಮುಂಜಾನೆ ನಡೆದಿದೆ.
ಮಿರ್ಜಾಪುರ–ವಾರಣಾಸಿ ಗಡಿಯಲ್ಲಿರುವ ಕಚವಾನ್ ಮತ್ತು ಮಿರ್ಜಾಮುರಾದ್ ನಡುವಿನ ಜಿಟಿ ರಸ್ತೆಯಲ್ಲಿ ಮುಂಜಾನೆ 1 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ತಿಳಿಸಿದ್ದಾರೆ.
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆ ವೇಳೆ ಟ್ರ್ಯಾಕ್ಟರ್ ನಲ್ಲಿ 13 ಮಂದಿ ಕಾರ್ಮಿಕರಿದ್ದರು.
ಘಟನೆ ಸಂಬಂಧ ಕಚವಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಅಭಿನಂದನ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296