ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಗೆ ಜಾಮೀನು ಪಡೆಯಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿದೆ. ಈ ನಡುವೆ ದರ್ಶನ್ ಅವರು ತೀವ್ರ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅನಾರೋಗ್ಯವೇ ಅವರಿಗೆ ವರವಾಗುತ್ತಾ? ಅನಾರೋಗ್ಯದ ಕಾರಣಕ್ಕೆ ಅವರಿಗೆ ಜಾಮೀನು ಸಿಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಬಳ್ಳಾರಿ ಜೈಲಿಗೆ ಬಂದಾಗಿನಿಂದಲೂ ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಜೈಲಿಗೆ ಬಂದಿದ್ದ ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸಿದ್ದು ಬೆನ್ನಿನಲ್ಲಿ ಊತ ಕಾಣಿಸಿಕೊಂಡಿದೆ, ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ. ಆದರೆ ಸದ್ಯಕ್ಕೆ ದರ್ಶನ್ ಸ್ಕ್ಯಾನಿಂಗ್ ಕೂಡಾ ಮಾಡಿಸಿಕೊಳ್ಳಲು ನಿರಾಕರಿಸಿದ್ದು ಕೇವಲ ನೋವು ನಿವಾರಕ ಗುಳಿಗೆ ಸೇವಿಸುತ್ತಿದ್ದಾರೆ.
ಬೆಂಗಳೂರಿಗೆ ಹೋದ ಮೇಲೆ ನಾನೇ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುವೆ ಎಂದಿದ್ದಾರಂತೆ. ಆದರೆ ಇದೇ ವಿಚಾರ ಅವರ ಜಾಮೀನು ಭವಿಷ್ಯಕ್ಕೆ ವರವಾಗುವ ಸಾಧ್ಯತೆಯಿದೆ. ಅನಾರೋಗ್ಯವಾಗಿದೆ, ಶಸ್ತ್ರಚಿಕಿತ್ಸೆಯ ಅಗತ್ಯವಿದೆ. ಹೀಗಾಗಿ ಜಾಮೀನು ನೀಡಿ ಎಂದು ವಕೀಲರು ವಾದ ಮಂಡಿಸಬಹುದು ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


