ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಇದೀಗ ಲೋಕಾಯುಕ್ತ ಪೊಲೀಸರಿಗೆ ಮತ್ತೊಂದು ದೂರು ನೀಡಿದ್ದು, ಸಿದ್ದರಾಮಯ್ಯನವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಸ್ವಾಭಿಮಾನಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್ ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ಧರಾಗಿ ಎಂದು ಕರೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಮೈಸೂರಿನ ಲೋಕಾಯುಕ್ತ ಎಸ್ಪಿ ಉದೇಶ್ ಅವರಿಗೆ ವಾಟ್ಸಾಪ್ ಮೂಲಕ ದೂರು ನೀಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಬಹಿರಂಗವಾಗಿ ಪ್ರಚೋದನೆ ನೀಡುತ್ತಿದ್ದಾರೆ.
ಇಂತಹ ಪ್ರಚೋದನೆಯಿಂದ ನನ್ನ ಹಾಗೂ ನನ್ನ ಕುಟುಂಬಕ್ಕೆ ತೊಂದರೆಯಾಗುವ ಮತ್ತು ಸಮಾಜದ ಸ್ವಾಸ್ಥ್ಯಕ್ಕೆ ಹಾನಿಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಿದ್ದರಾಮಯ್ಯ ಅವರನ್ನು ಬಂಧಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q