nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರದೇ ಶಕ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    ರಾಜ್ಯ ಸುದ್ದಿ October 7, 2024

    ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರದೇ ಶಕ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminOctober 7, 2024No Comments2 Mins Read
    dasara

    Provided by
    Provided by

    ತುಮಕೂರು: ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರದೇ ಶಕ್ತಿ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಹೇಳಿದರು.

    ತುಮಕೂರು ದಸರಾ ೨೦೨೪ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ರಾಜ್ಯ ಬಾಲಭವನ ಸೊಸೈಟಿ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕ್ರೀಡಾ ದಸರಾ ಹಾಗೂ ಮಹಿಳಾ ದಸರಾ ರಂಗೋಲಿ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ದೇಶ ವೇಗವಾಗಿ ಮುನ್ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಹಿಳೆಯರು ತಮ್ಮ ಪಾತ್ರ ಏನೆಂಬುದನ್ನು ಅರ್ಥೈಸಿಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನಿಗದಿಪಡಿಸಿದ ಬಳಿಕ ಇಂದು ದೇಶದಾದ್ಯಂತ ೧೪ ಲಕ್ಷ ಮಹಿಳೆಯರು ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿದ್ದಾರೆ. ಈ ಮೂಲಕ ದೇಶದ ಅಭಿವೃದ್ಧಿಯಲ್ಲಿ ತಮ್ಮ ಶಕ್ತಿ ತೋರಿಸಿದ್ದಾರೆ ಎಂದರು.

    ದೇಶದ ಎಲ್ಲಾ ವಲಯದಲ್ಲಿಯೂ ಮಹಿಳೆಯರು ತಮ್ಮ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿ ಹೊಂದುತ್ತಿದ್ದಾರೆ. ಮಹಿಳೆಯರು ಎಂದಿಗೂ ಸಮರ್ಥರು ಎಂದು ಸಚಿವರು ಹೇಳಿದರು.


    Provided by
    Provided by

    ನಮ್ಮ ದೇಶದ ಸಂಸ್ಕೃತಿ ಪರಂಪರೆ ಉಳಿಯಬೇಕು. ಈ ಹಿನ್ನೆಲೆಯಲ್ಲಿ ತುಮಕೂರು ದಸರಾ ಆಚರಣೆಯಲ್ಲಿ ರಂಗೋಲಿ ಸ್ಪರ್ಧೆ ಮತ್ತಿತರ ಗ್ರಾಮೀಣ ಕ್ರೀಡಾ ಕೂಟಗಳನ್ನು ಆಯೋಜಿಸಲಾಗಿದೆ. ತುಮಕೂರು ದಸರಾದಲ್ಲಿ ನಮ್ಮ ಜಿಲ್ಲೆಯ ಮಹಿಳೆಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದು ಹರ್ಷ ತಂದಿದೆ ಎಂದರು.
    ಜ್ಞಾನವನ್ನು ಹೆಚ್ಚಿಸುವ ಗ್ರಾಮೀಣ ಆಟಗಳು ಕಣ್ಮರೆ:

    ಮನುಷ್ಯನ ಜ್ಞಾನದ ಮಟ್ಟವನ್ನು ಹೆಚ್ಚಿಸುತ್ತಿದ್ದ ಅಳು–ಗುಣಿಮನೆ, ಕುಂಟೆ–ಬಿಲ್ಲೆ, ಹಗ್ಗ– ಜಗ್ಗಾಟ, ಲಗೋರಿ, ಚಿನ್ನಿದಾಂಡಿನಂತಹ ಗ್ರಾಮೀಣ ಆಟಗಳು ಕಣ್ಮರೆಯಾಗುತ್ತಿವೆ ಎಂದು ಬೇಸರ ವ್ಯಕ್ತ ಪಡಿಸಿದ ಅವರು, ಕಣ್ಮರೆಯಾಗುತ್ತಿರುವ ನಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನು ಉಳಿಸಲು ಗ್ರಾಮೀಣ ಕ್ರೀಡಾ ಸ್ಪರ್ಧೆಗಳು ಪ್ರಯೋಜಕಾರಿಯಾಗಿವೆ ಎಂದು ತಿಳಿಸಿದರು.

    ಗಿಡ–ಮರಗಳನ್ನೇ ತಮ್ಮ ಮಕ್ಕಳಂತೆ ಬೆಳಸಿ ವೃಕ್ಷಮಾತೆ ಎನಿಸಿಕೊಂಡಿರುವ ಸಾಲು ಮರದ ತಿಮ್ಮಕ್ಕನವರು ಮಹಿಳಾ ದಸರಾ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ದಾರೆ. ತಮಗೆ ಮಕ್ಕಳಿಲ್ಲದ ಕಾರಣ ಲಕ್ಷಾಂತರ ಗಿಡಗಳನ್ನು ನೆಡುವ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕ ಜಿ.ಬಿ. ಜ್ಯೋತಿ ಗಣೇಶ್ ತುಮಕೂರು ದಸರಾ ಅತ್ಯಂತ ಯಶಸ್ಸಿನ ಹೊಸ್ತಿಲಲ್ಲಿ ಸಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಎಲ್ಲಾ ಕಾರ್ಯಕ್ರಮಗಳು ಉತ್ತಮವಾಗಿ ಸಜ್ಜುಗೊಳ್ಳುತ್ತಿವೆ ಎಂದರು.

    ಈ ಕಾರ್ಯಕ್ರಮದಲ್ಲಿ ಸಾಲುಮರದ ತಿಮ್ಮಕ್ಕ ಅತಿಥಿಗಳಾಗಿ ಭಾಗವಹಿಸಿದ್ದರು. ಶಾಸಕ ಹೆಚ್. ವಿ. ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಎನ್. ಚೇತನ್ ಕುಮಾರ್, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ರಾಜೇಶ್ವರಿ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯದ ಅಭಿಯಾನ ವ್ಯವಸ್ಥಾಪಕರಾದ ದೊಡ್ಡವಲ್ಲಪ್ಪ ಹಾಗೂ ಅಂಜನ್ ಮೂರ್ತಿ, ಅಧಿಕಾರೇತರ ಸದಸ್ಯರಾದ ತುಮಕೂರು ದಸರಾ ಸಮಿತಿ ಕುಮುದಾ ಹರೀಶ್, ಮುಖಂಡರು ಹಾಗೂ ಸಮಾಜ ಸೇವಕ ನಾಗಮಣಿ, ಪತ್ರಕರ್ತರಾದ ನಾಗರತ್ನ ಶಿವಣ್ಣ, ಸಾ.ಚಿ. ರಾಜ್‌ಕುಮಾರ್, ಕಮಲ ಗಂಗಹನುಮಯ್ಯ ಮತ್ತಿತರರು ಭಾಗವಹಿಸಿದ್ದರು.

    ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಸಚಿವರಿಂದ ಸನ್ಮಾನ :

    ತುಮಕೂರು ದಸರಾ ಉತ್ಸವ ಪ್ರಯುಕ್ತ ವಿವೇಕಾನಂದ ಸ್ಪೋರ್ಟ್ಸ್ ಮತ್ತು ಸಾಂಸ್ಕೃತಿಕ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ೩ನೇ ತುಮಕೂರು ದಸರಾ ಸ್ಪೋರ್ಟ್ಸ್ ಶೂಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

    ಈ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಮಟ್ಟದ ಜೂನಿಯರ್ ವರ್ಲ್ಡ್ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಗಾಂಭೀರ್ಯ ವಿ. ಗೌಡ ಹಾಗೂ ಖೇಲೋ ಇಂಡಿಯಾ ಯೂತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ವಿಜೇತ ಹಾಗೂ ರೆಕಾರ್ಡ್ ಹೋಲ್ಡರ್ ಜೊನಾಥನ್ ಗ್ಯಾವಿನ್ ಆಂಟೋನಿ, ರಾಷ್ಟ್ರಮಟ್ಟದ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ವಿಜೇತರಾದ ಮಹಾಲಕ್ಷ್ಮಿ, ಜಿ. ಅದಿತಿ ಅವರನ್ನು ಸಚಿವರು ಸನ್ಮಾನಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.