ದಕ್ಷಿಣ ಕನ್ನಡ: ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ ನಿನ್ನೆ ಮಂಗಳೂರಿನ ಕೂಳೂರು ಸೇತುವೆ ಬಳಿ ತನ್ನ ಬಿಎಂಡಬ್ಲು ಕಾರಿನಿಂದ ನಾಪತ್ತೆಯಾಗಿದ್ದರು. ಇಂದು ಅವರ ಮೃತದೇಹ ಪತ್ತೆಯಾಗಿದೆ.
ಫಲ್ಗುಣಿ ನದಿಯ ಕೂಳೂರು ಸೇತುವೆಯಿಂದ ಅವರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 52 ವರ್ಷದ ಮುಮ್ತಾಜ್ ಅಲಿ ಉದ್ಯಮಿಯಾಗಿದ್ದು, ಸಾಮಾಜಿಕ ಹಾಗೂ ಧಾರ್ಮಿಕ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು.
ಬ್ಲಾಕ್ ಮೇಲ್ ಹಾಗೂ ಹನಿಟ್ರಾಪ್ ನಿಂದ ಅಲಿ ಅವರು ಆತಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


