ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತುಕತೆ ನಡೆಸಿದ್ದು, ಹೊಸ ಚರ್ಚೆಗೆ ಕಾರಣವಾಗಿದೆ.
ಭಾನುವಾರವಷ್ಟೇ ತುಮಕೂರಿನಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸತೀಶ್ ಜಾರಕಿಹೊಳಿ ಭೇಟಿ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಬಿ.ವೈ.ವಿಜಯೇಂದ್ರ ಹಾಗೂ ಸತೀಶ್ ಜಾರಕಿಹೊಳಿ ಭೇಟಿ ನಡೆದಿದೆ.
ತಮ್ಮ ಸ್ವಕ್ಷೇತ್ರ ಶಿಕಾರಿಪುರದ ಸ್ಥಳೀಯ ಸಮಸ್ಯೆಗಳ ಕುರಿತು ವಿಜಯೇಂದ್ರ ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ . ಆದರೆ ಪ್ರಭಾವಿ ನಾಯಕರ ಗುಪ್ತ ಭೇಟಿ ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


