ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿ ಹುಳಿಯಾರು ಬಸ್ ನಿಲ್ದಾಣದಲ್ಲಿ ಅನಾರೋಗ್ಯದಿಂದ ಅಸ್ವಸ್ಥಳಾಗಿದ್ದ ಸುಮಾರು 70 ವರ್ಷದ ಅಪರಿಚಿತ ವೃದ್ಧೆಯನ್ನು ಸೆಪ್ಟೆಂಬರ್ 28ರಂದು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರು ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 1ರಂದು ಬೆಳಿಗ್ಗೆ 6:40 ಗಂಟೆಗೆ ಮೃತಪಟ್ಟಿದ್ದು, ವಾರಸುದಾರರು ಯಾರೆಂದು ತಿಳಿದು ಬಂದಿರುವುದಿಲ್ಲ.
ಮೃತೆಯು 162 ಸೆಂ.ಮೀ. ಎತ್ತರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಮೃತರ ಮೈಮೇಲೆ ನೀಲಿ ಬಣ್ಣದ ನೈಟಿ ಇರುತ್ತದೆ. ಮೃತಳ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.ಸಂ. 08133-256150 / 267234, 08134-251084, 0816-2272451ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296