ಬೆಂಗಳೂರು: ಮುಡಾ ಪ್ರಕರಣವನ್ನು ಬಿಜೆಪಿ ಪ್ರಚಾರಕ್ಕೆ ಬಳಸಿಕೊಂಡಿರುವುದೇ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲುಂಟಾಗಲು ಕಾರಣ ಎಂದು ಕಾಂಗ್ರೆಸ್ಸಿನ ಹಿರಿಯ ನಾಯಕ ಕೆ.ಬಿ. ಕೋಳಿವಾಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೇ ತಾನು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಿ, ಪಕ್ಷಕ್ಕೆ ಮುಜುಗರ ತಪ್ಪಿಸಬೇಕು ಎಂದು ಹೇಳಿದ್ದೆ. ಆ ಹೇಳಿಕೆಗೆ ನಾನು ಈಗಲೂ ಬದ್ಧನಾಗಿರುವುದಾಗಿ ಅವರು ತಿಳಿಸಿದರು.
ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಗೆಲುವು ಕಂಡಿದೆ. ಹರಿಯಾಣದಲ್ಲಿ ಸೋಲಿಗೆ ಮುಡಾ ಪ್ರಕರಣವೇ ಕಾರಣ. ಅಂದು ನಾನು ಹೇಳಿದ್ದು, ಈಗ ಸತ್ಯವಾಗಿದೆ. ತಾವು ಸಕ್ರಿಯ ರಾಜಕಾರಣದಿಂದ ದೂರವಿದ್ದರೂ ಕಾಂಗ್ರೆಸ್ ಪಕ್ಷದ ಪರವಾಗಿದ್ದೇನೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296