ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಲವು ವರ್ಷಗಳ ಬೇಡಿಕೆಯಾದ ಗ್ರಾಚ್ಯುಟಿ ಬಗ್ಗೆ ಸಚಿವ ವಿ.ಸೋಮಣ್ಣ ಮಹತ್ವದ ಮಾಹಿತಿ ನೀಡಿದ್ದು, ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಸೇರಿದಂತೆ ಇರುವ ಹಲವು ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರದ ಬಳಿಗೆ ನಿಯೋಗವನ್ನು ಕರೆದೊಯ್ಯುವುದಾಗಿ ಭರವಸೆ ನೀಡಿದ್ದಾರೆ.
ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಆಯೋಜಿಸಿದ್ದ ಪೌಷ್ಟಿಕತೆ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣದ ಹಕ್ಕಿನೆಡೆಗೆ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಚಿವ ಸೋಮಣ್ಣ ಮಾತನಾಡಿದರು.
ಹಿಂದಿನ ವರ್ಷಗಳಲ್ಲಿ ಎದುರಾಗಿದ್ದ ಕೋವಿಡ್‌ನಂತಹ ಭೀಕರ ಪರಿಸ್ಥಿತಿಯಲ್ಲಿ ಜನ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದರು. ಈ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ ಎಂದರು. ಜನ ಭಯ ಪಡುವ ಸಮಯದಲ್ಲೂ ಆರೋಗ್ಯ ಇಲಾಖೆ ಜೊತೆಗೂಡಿ ಅಂಗನವಾಡಿ ಕಾರ್ಯಕರ್ತೆಯರು ಮಾಡಿದ ಸೇವೆಯನ್ನು ಕಣ್ಣಾರೆ ಕಂಡಿದ್ದೇನೆ.
ಆದರೆ, ಕಾರ್ಯಕರ್ತೆಯರು ತಮ್ಮ ಶ್ರಮಕ್ಕೆ ತಕ್ಕ ಸ್ಥಾನಮಾನಗಳನ್ನು ಪಡೆದುಕೊಂಡಿಲ್ಲ. ನೀವು ನ್ಯಾಯಯುತವಾಗಿ ಮುಂದಿಟ್ಟಿರುವ ಬೇಡಿಕೆಗಳನ್ನು ಪರಿಗಣಿಸುತ್ತೇವೆ ಎಂದು ಭರವಸೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


