nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ
    • 50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!
    • ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ
    • ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು
    • ತಿಪಟೂರು:  ಚಿನ್ನ ಕದ್ದು, ಮನೆಗೆ ಬೆಂಕಿ ಹಚ್ಚಿದ್ದ ಆರೋಪಿಗೆ ನ್ಯಾಯಾಂಗ ಬಂಧನ
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಮನಿಸಿ: ತುಮಕೂರು ದಸರಾ ಮೆರವಣಿಗೆ ಹಿನ್ನೆಲೆ  ವಾಹನ ಸಂಚಾರ ಮಾರ್ಗ ಬದಲಾವಣೆ
    ತುಮಕೂರು October 11, 2024

    ಗಮನಿಸಿ: ತುಮಕೂರು ದಸರಾ ಮೆರವಣಿಗೆ ಹಿನ್ನೆಲೆ  ವಾಹನ ಸಂಚಾರ ಮಾರ್ಗ ಬದಲಾವಣೆ

    By adminOctober 11, 2024No Comments3 Mins Read
    road change

    ತುಮಕೂರು:  ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಆಚರಿಸಲಾಗುತ್ತಿರುವ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 12ರಂದು ವೈಭವದ ದಸರಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಾಹನ ಸಂಚಾರ ಮಾರ್ಗ ಬದಲಾಯಿಸಿ ಕೆಲವು ಸ್ಥಳಗಳಲ್ಲಿ ವಾಹನಗಳನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.

    ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತ ಜಂಬೂಸವಾರಿ, 25 ಕಲಾತಂಡ, ತುಮಕೂರು ನಗರದ ದೇವರು, ವಿಂಟೇಜ್ ಕಾರು, ಅಶ್ವ, ಸಾಂಪ್ರಾಯದಾಯಿಕ ಉಡುಗೆ ತಂಡ ಪಾಲ್ಗೊಳ್ಳಲಿವೆ. ಸುಮಾರು 1.5 ಕಿ.ಮೀ.ಗಳಷ್ಟು ದೂರ ಸಾಗುವ ಮೆರವಣಿಗೆಯಲ್ಲಿ ವಿವಿಧ ಸಚಿವರು, ಸಂಸದರು, ಶಾಸಕರು, ಅಧಿಕಾರಿಗಳು, ಗಣ್ಯ ವ್ಯಕ್ತಿಗಳು, ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರು ಸೇರಿ ಸುಮಾರು 30,000–35,000 ಜನರು ಸೇರುವ ನಿರೀಕ್ಷೆಯಿರುವುದರಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ವಾಹನ ಸಂಚಾರ ಮಾರ್ಗವನ್ನು ಬದಲಾಯಿಸಿ ಆದೇಶ ಹೊರಡಿಸಲಾಗಿದೆ.


    Provided by
    Provided by

    ಮೆರವಣಿಗೆಯು ಅಶೋಕರಸ್ತೆ, ಸ್ವತಂತ್ರ ಚೌಕ, ಕೋಡಿ ಸರ್ಕಲ್, ಅಮಾನಿಕೆರೆರಸ್ತೆ, ಕೋತಿತೋಪು ರಸ್ತೆ, ಎಸ್.ಎಸ್. ಸರ್ಕಲ್ ಮಾರ್ಗವಾಗಿ ಭದ್ರಮ್ಮ ಸರ್ಕಲ್ ಮುಖಾಂತರ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಆಗಮಿಸಲಿದೆ.

    ತುಮಕೂರು ದಸರಾ ಮೆರವಣಿಗೆ ಹಿನ್ನೆಲೆಯಲ್ಲಿ ವಾಹನ ಸಂಚಾರ ಮಾರ್ಗದಲ್ಲಿ ವ್ಯತ್ಯಯ ಉಂಟಾಗಲಿದ್ದು, ನಗರದಲ್ಲಿ ಅಕ್ಟೋಬರ್ 12ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಾಹನ ಸಂಚಾರ ಮಾರ್ಗ ಬದಲಾವಣೆ ಆದೇಶ ಜಾರಿಯಲ್ಲಿರುತ್ತದೆ.

    ಬೆಂಗಳೂರು ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳು:

    ದಸರಾ ಮೆರವಣಿಗೆಯು ಬಿ.ಜಿ.ಎಸ್. ಸರ್ಕಲ್‌ನಿಂದ ಪ್ರಾರಂಭವಾಗುವ ಸಮಯದಲ್ಲಿ ಬಿ.ಜಿ.ಎಸ್. ಸರ್ಕಲ್ ಕಡೆಗೆ ಬರುವ ವಾಹನಗಳು ಎಸ್.ಎಸ್. ಸರ್ಕಲ್‌ ನಿಂದ ಕೋತಿತೋಪು ಮಾರ್ಗವಾಗಿ ಕೆ.ಇ.ಬಿ. ಸರ್ಕಲ್–ಹೊರಪೇಟೆ–ಗುಂಚಿ ಸರ್ಕಲ್-–ಚರ್ಚ್ ಸರ್ಕಲ್ ಮೂಲಕ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬರುವುದು. ದಸರಾ ಮೆರವಣಿಗೆಯ ಮುಂಭಾಗವು ಕೋಡಿ ಸರ್ಕಲ್‌ ಗೆ ಬಂದಾಗ ಜಿ.ಎಸ್.ಸರ್ಕಲ್ ಕಡೆಗೆ ಬರುವ ವಾಹನಗಳು ಬಿ.ಹೆಚ್.ರಸ್ತೆ ಮಾರ್ಗವಾಗಿ ಭದ್ರಮ್ಮ ಸರ್ಕಲ್, ಬಿ.ಜಿ.ಎಸ್. ಸರ್ಕಲ್ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬರುವುದು.

    ಬೆಂಗಳೂರು ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳು:

    ದಸರಾ ಮೆರವಣಿಗೆಯು ಬೆಸ್ಕಾಂ ಕಚೇರಿ ಮುಂದಕ್ಕೆ ಬಂದಾಗ ಎನ್.ಹೆಚ್–48 ರಸ್ತೆಯಿಂದ ಸತ್ಯಮಂಗಲ ಸರ್ವಿಸ್ ರಸ್ತೆಗೆ ಬಂದು ಶಿರಾಗೇಟ್–ಗಾರ್ಡನ್ ರಸ್ತೆ–ದಿಬ್ಬೂರು ರಸ್ತೆ ಜಂಕ್ಷನ್–ಗುಬ್ಬಿ ರಿಂಗ್ ರಸ್ತೆ ಜಂಕ್ಷನ್–ಗುಬ್ಬಿಗೇಟ್–ಲಕ್ಕಪ್ಪ ಸರ್ಕಲ್ ಮೂಲಕ ಬರುವುದು. ನಂತರದಲ್ಲಿ ಪೂರ್ಣ ಮೆರವಣಿಗೆಯು ಎಸ್.ಎಸ್. ಸರ್ಕಲ್‌ನಿಂದ ಭದ್ರಮ್ಮ ಸರ್ಕಲ್ ಕಡೆಗೆ ಹೋದ ನಂತರ ಎಲ್ಲಾ ವಾಹನಗಳು ಎಸ್.ಎಸ್. ಸರ್ಕಲ್–ಕೋತಿತೋಪು ರಸ್ತೆ–ಕೋಡಿ ಸರ್ಕಲ್ ಅಶೋಕ ರಸ್ತೆಗೆ ಬರುವುದು.

    ಕುಣಿಗಲ್ ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳು :

    ದಸರಾ ಮೆರವಣಿಗೆಯು ಬಿ.ಜಿ.ಎಸ್. ಸರ್ಕಲ್‌ನಿಂದ ಪ್ರಾರಂಭವಾಗಿ ಪ್ರಶಾಂತ ಟಾಕೀಸ್ ಬಿಟ್ಟು ಹೋಗುವವರೆವಿಗೂ ಕುಣಿಗಲ್ ಸರ್ಕಲ್‌ ನಿಂದ ಗುಬ್ಬಿ ರಿಂಗ್ ರಸ್ತೆ ಜಂಕ್ಷನ್, ಗುಬ್ಬಿಗೇಟ್–ಲಕ್ಕಪ್ಪ ಸರ್ಕಲ್–ಜೆ.ಸಿ ರಸ್ತೆ-ಹೆಲ್ತ್ಕ್ಯಾಂಟೀನ್ ರಸ್ತೆ ಮೂಲಕ ಹಳೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬರುವುದು.

    ಗುಬ್ಬಿ ಗೇಟ್ ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳು: ದಸರಾ ಮೆರವಣಿಗೆಯು ಬಿ.ಜಿ.ಎಸ್. ಸರ್ಕಲ್‌ನಿಂದ ಪ್ರಾರಂಭವಾಗಿ ಪ್ರಶಾಂತ ಟಾಕೀಸ್ ಬಿಟ್ಟು ಹೋಗುವವರೆವಿಗೂ ಗುಬ್ಬಿಗೇಟ್–ಲಕ್ಕಪ್ಪ ಸರ್ಕಲ್–ಜೆ.ಸಿ ರಸ್ತೆ–ಹೆಲ್ತ್ಕ್ಯಾಂಟೀನ್ ರಸ್ತೆ ಮೂಲಕ ಹಳೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬರುವುದು.

    ಶಿರಾ ಕಡೆಯಿಂದ ತುಮಕೂರು ನಗರಕ್ಕೆ ಬರುವ ವಾಹನಗಳು :

    ದಸರಾ ಮೆರವಣಿಗೆಯು ಅಶೋಕ ರಸ್ತೆಗೆ ಬಂದಾಗ ಶಿರಾ ಕಡೆಯಿಂದ ಬರುವ ವಾಹನಗಳು ಶಿರಾಗೇಟ್–ಗಾರ್ಡನ್ ರಸ್ತೆ–ದಿಬ್ಬೂರುರಸ್ತೆ ಜಂಕ್ಷನ್–ಗುಬ್ಬಿರಿಂಗ್‌ ರಸ್ತೆ ಜಂಕ್ಷನ್–ಗುಬ್ಬಿಗೇಟ್–ಲಕ್ಕಪ್ಪ ಸರ್ಕಲ್ ಮೂಲಕ ಬರುವುದು. ಪೂರ್ಣ ಮೆರವಣಿಗೆಯು ಕೋಡಿ ಸರ್ಕಲ್‌ನಿಂದ ಕೋತಿತೋಪು ರಸ್ತೆಗೆ ಸಾಗಿದ ನಂತರ ಎಲ್ಲಾ ವಾಹನಗಳು ಕೋಡಿ ಸರ್ಕಲ್ — ಅಶೋಕ ರಸ್ತೆಗೆ ಬರುವುದು.

    NO PARKING ZONE (ವಾಹನ ನಿಲುಗಡೆ ನಿಷೇಧಿತ ಪ್ರದೇಶ):

    ದಸರಾ ಮೆರವಣಿಗೆ ನಿಮಿತ್ತ ಅಕ್ಟೋಬರ್ 12ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಿ.ಜಿ.ಎಸ್ ಸರ್ಕಲ್- ಚರ್ಚ್ ಸರ್ಕಲ್– ಕೋಡಿ ಸರ್ಕಲ್-ಅಮಾನಿಕೆರೆ ರಸ್ತೆ–ಕೋತಿತೋಪು ರಸ್ತೆ-ಎಸ್.ಎಸ್ ಸರ್ಕಲ್-ಭದ್ರಮ್ಮ ಸರ್ಕಲ್ –ಬಿ.ಜಿ.ಎಸ್ ಸರ್ಕಲ್-ಲಕ್ಕಪ್ಪ ಸರ್ಕಲ್–ಕುಣಿಗಲ್ ರಸ್ತೆಗಳಲ್ಲಿ ಯಾವುದೇ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ.

    ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ವಾಹನ ಸವಾರರಿಗೆ ಸೂಚಿಸಲಾಗಿದೆ, ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ದ ಕಾನೂನು ರೀತ್ಯಾ ಅಗತ್ಯ ಕ್ರಮ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಧಾನಿ ಮೋದಿ ಜೊತೆಗಿನ ‘ರಹಸ್ಯ’ ಮಾತುಕತೆ ಏನಿತ್ತು? ಗುಟ್ಟು ಬಿಟ್ಟುಕೊಟ್ಟ ಸಿಎಂ ಸಿದ್ದರಾಮಯ್ಯ

    April 20, 2026

    ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಂಡ್ಯದ ಆದಿಚುಂಚನಗಿರಿ ಮಠದ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾಗ, ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ…

    50 ಮಹಿಳಾ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್; ಖತರ್ನಾಕ್ ಉದ್ಯಮಿ ಕೃಪಲಾನಿ ಅರೆಸ್ಟ್!

    April 20, 2026

    ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ವಿರೋಧಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

    April 20, 2026

    ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ 1.25 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರು ಖರೀದಿಗೆ ಸರ್ಕಾರ ಅಸ್ತು

    April 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.