ನವದೆಹಲಿ: ರಾಮರಾಜ್ಯ ಅಂದ್ರೆ ಎಲ್ಲರಿಗೂ ಶಿಕ್ಷಣ, ಆರೋಗ್ಯ ಸಿಗಬೇಕು ಎಂದು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಪೂರ್ವ ದೆಹಲಿಯ ಮಯೂರ ವಿಹಾರದಲ್ಲಿ ರಾಮಲೀಲಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಯಾವುದೇ ಮಕ್ಕಳು ಅವಿದ್ಯಾವಂತರಾಗಿ ಉಳಿಯಬಾರದು. ಆರೋಗ್ಯದ ಸೌಲಭ್ಯ ಸಿಗದೇ ಹೋಗಬಾರದು ಎಂದು ಹೇಳಿದರು.
ದೆಹಲಿಯ ಜನರ ಸೇವೆಗಾಗಿ ಆಮ್ ಆದ್ಮಿ ಪಕ್ಷವು ರಾಮರಾಜ್ಯದ ಆದರ್ಶಗಳನ್ನು ಪಾಲಿಸುತ್ತಿದೆ ಎಂದು ನುಡಿದರು.
ಶ್ರೀರಾಮ ದೇವರ ನ್ಯಾಯ, ಸಮಾನತೆ, ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಅವರು ಮನವಿ ಮಾಡಿದರು.
ಭಾರತೀಯ ಹಾಗೂ ಹಿಂದೂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ರಾಮನ ಆದರ್ಶಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಾಮಲೀಲಾದಂತಹ ಕಾರ್ಯಕ್ರಮಗಳನ್ನು ವೀಕ್ಷಿಸುವಂತೆ ಮಾಡುವ ಮೂಲಕ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೂ ಪಸರಿಸಬೇಕು ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296