nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ
    • ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಗತ್ತಿನ ಸೃಷ್ಠಿಗೆ ಭಗವಂತನೇ ನೇರ ಕಾರಣ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
    ತಿಪಟೂರು October 13, 2024

    ಜಗತ್ತಿನ ಸೃಷ್ಠಿಗೆ ಭಗವಂತನೇ ನೇರ ಕಾರಣ: ಡಾ.ನಿರ್ಮಲಾನಂದನಾಥ ಸ್ವಾಮೀಜಿ

    By adminOctober 13, 2024No Comments2 Mins Read
    dr nirmalanandanath swamiji

    ತಿಪಟೂರು : ತಾಲ್ಲೂಕಿನ ದಸರಿಘಟ್ಟ ಆದಿಚುಂಚನಗಿರಿ ಶಾಖಾಮಠದ ಚೌಡೇಶ್ವರಿ ದೇವಿಯವರ 32ನೇ ವರ್ಷದ ಮುಳ್ಳುಗದ್ದಿಗೆ ಉತ್ಸವ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ ನೀಡಿದರು.

    ಮನುಷ್ಯನಲ್ಲಿ ಕಷ್ಟಕಾರ್ಪಣ್ಯಗಳು ದೂರವಾಗಲು ಭಗವಂತನ ನಾಮಸ್ಮರಣೆ ಅತಿಮುಖ್ಯವಾಗಿದೆ. ಜಗತ್ತಿನ ಸೃಷ್ಠಿಗೆ ಭಗವಂತನೇ ನೇರ ಕಾರಣ. ಮುಳ್ಳುಗಳು ಕಷ್ಟದ ಪ್ರತೀಕ. ಅದನ್ನು ಮೆಟ್ಟಿ ನಿಲ್ಲುವಂತ ಶಕ್ತಿ ನೀಡುವವಳೇ ಚೌಡೇಶ್ವರಿದೇವಿ. ದೇವಿ ಪವಾಡದಿಂದ ಮುಳ್ಳುಗಳಂತ ಕಷ್ಟಗಳ ಮೇಲೆ ನಡೆಯುವಾಗ ಆಕೆಯ ಸ್ಮರಣೆ ಮಾಡಿದರೆ ಕಷ್ಟಗಳು ಮಂಜಿನಂತೆ ಕರಗುತ್ತವೆ. ಸಂಸಾರದ ಸಾಗರದಲ್ಲಿ ಸಹ ಕಷ್ಟಗಳು ನಿವಾರಣೆಯಾಗಲು ದೈವೀಭಕ್ತಿ ಅಗತ್ಯ. ಸುಖ ಹಾಗೂ ದುಃಖಗಳು ಬಂದಾಗ ದೇವರ ಸ್ಮರಣೆ ಮಾಡಬೇಕು. ಜಗತ್ತಿನ ಸೃಷ್ಠಿಕರ್ತ ಪರಮಾತ್ಮನಾದ್ದರಿಂದ ಮನುಷ್ಯನಾದವನು ಧರ್ಮದಾನಗಳಿಂದ ಬದುಕಬೇಕು. ವಿಜ್ಞಾನ ಎಷ್ಟೇ ಮುಂದುವರೆದರೂ ಜ್ಞಾನವೆಂಬುದು ಮಸುಕಾಗಿದೆ. ಪ್ರಕೃತಿಯ ಮುಂದೆ ಮನುಷ್ಯ ಕ್ಷಣಿಕನಾಗಿದ್ದಾನೆ. ಅಂತಃಕರಣ ಶುದ್ಧಿಗೊಂಡರೆ ಮತ್ತಷ್ಟು ಶಕ್ತಿ ಪಡೆಯಬಹುದು. ಮನುಷ್ಯನ ಪಯಣ ಯಾವಾಗಲೂ ಒಳ್ಳೆಯ ದಿಕ್ಕಿನಲ್ಲಿ ಸಾಗಲಿ. ದ್ವೇಷ, ಅಸೂಹೆ, ಸ್ವಾರ್ಥತೆಯನ್ನು ಬಿಟ್ಟು ನಡೆದಾಗ ದೇವಿಯ ಆಶೀರ್ವಾದದಿಂದ ಜಯ ಸಾಧ್ಯವಾಗುತ್ತದೆ. ನಮ್ಮ ಕ್ಷೇತ್ರದ ಚೌಡೇಶ್ವರಿ ದೇವಿಗೆ ಅನೇಕರು ಭಕ್ತರಾಗಿದ್ದು ಶ್ರೀಕ್ಷೇತ್ರ ದಸರೀಘಟ್ಟ ಪುಣ್ಯಕ್ಷೇತ್ರದ ಅಭಿವೃದ್ದಿಗೆ ಚಂದ್ರಶೇಖರನಾಥ ಸ್ವಾಮೀಜಿ, ಟ್ರಸ್ಟಿಗಳು, ಗ್ರಾಮಸ್ಥರು ಇಲ್ಲಿನ ರಾಜಕಾರಣಿಗಳು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.


    Provided by
    Provided by

    ವಕೀಲ ಡಿ.ಎಲ್.ಜಗದೀಶ್ ಮಾತನಾಡಿ, ನವರಾತ್ರಿಯ ಸಂದರ್ಭದಲ್ಲಿ ಮನುಷ್ಯನಲ್ಲಿರುವ ಕೆಟ್ಟ ಗುಣಗಳನ್ನು ಹೋಗಲಾಡಿಸಿ ಉತ್ತಮ ಜೀವನವನ್ನು ನಡೆಸಲು ದೇವಿಯ ಆಶೀರ್ವಾದ ಅತ್ಯವಶ್ಯವಾಗಿದೆ. ಪ್ರತಿಯೊಬ್ಬರಲ್ಲಿಯೂ ಆಧ್ಯಾತ್ಮಿಕತೆಯ ಕಡೆಗೆ ಒಲವು ಹೆಚ್ಚಾಗಿದ್ದು, ಶ್ರದ್ಧಾ ಭಕ್ತಿಯಿಂದ ನಡೆದಾಗ ದೇವಿಯೂ ಎಂದಿಗೂ ಯಾರನ್ನು ಕೈಬಿಡುವುದಿಲ್ಲ. ಆದಿಚುಂಚನಗಿರಿ ಮಠಗಳು ದೇಶದಾದ್ಯಂತ ಭಕ್ತರಿಗೆ ಅನೇಕ ಸೌಕರ್ಯಗಳನ್ನು ನೀಡುತ್ತಿದ್ದು ಇನ್ನೂ ಹೆಚ್ಚಿನ ಶಾಖಾಮಠಗಳು ಸ್ಥಾಪನೆಯಾಗಲಿ ಎಂದರು.

    ಸಮಾರಂಭದಲ್ಲಿ ಬಿಜಿಎಸ್ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಕಾಶನಾಥ ಸ್ವಾಮೀಜಿ, ದಸರೀಘಟ್ಟ ಶಾಖಾಮಠದ ಚಂದ್ರಶೇಖರನಾಥ ಸ್ವಾಮೀಜಿ, ಮಂಗಳೂರು ಶಾಖಾಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ, ಹಾಸನದ ಶಂಭುನಾಥ ಸ್ವಾಮೀಜಿ, ಹೊಸಕೊಪ್ಪಲು ಮಠದ ಶ್ರೀ ಬಸವೇಶ್ವರಚೈತನ್ಯ ಸ್ವಾಮೀಜಿ, ಚೈತನ್ಯನಾಥ ಸ್ವಾಮೀಜಿ,  ಮಠದ ಟ್ರಸ್ಟಿ ಡಾ.ಜಿತೇಂದ್ರ, ಗುಡಿಗೌಡ ಕುಮಾರಸ್ವಾಮಿ, ಶ್ರೀರಂಗ ಆಸ್ಪತ್ರೆಯ ವೈದ್ಯ ಡಾ.ವಿವೇಚನ್, ಸೇರಿದಂತೆ ಗ್ರಾಮಸ್ಥರು ಭಕ್ತಾದಿಗಳು ಇದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ಕೊರಟಗೆರೆ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆಗಳನ್ನು ನಡೆಸಲು ಟಾಟಾ ಪವರ್ ಸೇರಿದಂತೆ ಯಾವುದೇ ಖಾಸಗಿ ಕಂಪನಿಗಳಿಗೆ ಅನುಮತಿ ನೀಡಬಾರದು ಎಂದು…

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.