ರಾಯಚೂರು: ಕಾರು ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ವಿಜಯದಶಮಿ ಹಬ್ಬದಂದು ರಾತ್ರಿ ತಾತನಿಗೆ ಬನ್ನಿ ಕೊಡಲೆಂದು ಹೋಗಿದ್ದ ಮೊಮ್ಮಕ್ಕಳು ಬನ್ನಿ ಕೊಟ್ಟಿ ವಾಪಸ್ ಬರುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದಾರೆ.
ರಾಯಚೂರಿನ ಡಿಸಿ ಬಂಗಲೆ ಬಳಿ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
20 ವರ್ಷದ ಸಾಕ್ಷಿ ಮೃತ ಯುವತಿ. ಇನ್ನೋರ್ವ ಯುವತಿ ಸಂಜನಾ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ಬಳಿಕ ಕಾರು ಚಾಲಕ ಸ್ಥಳದಲ್ಲೇ ಕಾರು ಬಿಟ್ಟು ಎಸ್ಕೇಪ್ ಆಗಿದ್ದಾನೆ. ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


