‘ಮಾರ್ಟಿನ್’ ಸಿನಿಮಾ ರಿಲೀಸ್ ಆಗಿ ಮೂರು ದಿನಗಳು ಕಳೆದಿವೆ. ಈ ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೊಂದೆಡೆ ಧ್ರುವ ಅವರ ಅಭಿಮಾನಿಗಳು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಧ್ರುವ ಸರ್ಜಾ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಈ ಸಿನಿಮಾದ ಗಳಿಕೆ ಬಗ್ಗೆ ಮಾಹಿತಿ ಸಿಕ್ಕಿದೆ. ದಸರಾ ಸಂದರ್ಭದಲ್ಲಿ ರಿಲೀಸ್ ಆದ ಈ ಚಿತ್ರ ಮೂರು ದಿನಗಳಲ್ಲಿ ಗಳಿಕೆ ಮಾಡಿದ್ದು ಎಷ್ಟು ಎಂಬ ಬಗ್ಗೆ ಮಾಹಿತಿ ರಿವೀಲ್ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.
ಎಪಿ ಅರ್ಜುನ್ ಅವರು ‘ಮಾರ್ಟಿನ್’ ಚಿತ್ರವನ್ನು ನಿರ್ದೇಶನ ಮಾಡಿದರೆ, ಉದಯ್ ಮೆಹ್ತಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಧ್ರುವ ಸರ್ಜಾ ವೃತ್ತಿ ಬದುಕಿನಲ್ಲೇ ಅತಿ ದೊಡ್ಡ ಬಜೆಟ್ನ ಚಿತ್ರವಾಗಿದೆ. ಸಿನಿಮಾದ ಬಜೆಟ್ 100 ಕೋಟಿ ರೂಪಾಯಿ ದಾಟಿದೆ.
Sacnilk ವರದಿ ಮಾಡಿರುವ ಪ್ರಕಾರ ‘ಮಾರ್ಟಿನ್’ ಸಿನಿಮಾ ಮೂರು ದಿನಗಳಲ್ಲಿ ಸುಮಾರು 16 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆಯಂತೆ. ಬಜೆಟ್ ಗೆ ಹೋಲಿಕೆ ಮಾಡಿದರೆ ಸಿನಿಮಾದ ಗಳಿಕ ಸ್ವಲ್ಪ ಕಡಿಮೆ ಆಯಿತು ಎಂದೇ ಹೇಳಬಹುದು.
ಮೊದಲ ದಿನ6.7 ಕೋಟಿ ರೂಪಾಯಿ, ಎರಡನೆ ದಿನ 5.5 ಕೋಟಿ ರೂಪಾಯಿ, ಮೂರನೇ ದಿನ ಸುಮಾರು ನಾಲ್ಕು ಕೋಟಿ ರೂಪಾಯಿ ಹರಿದು ಬಂದಿದೆ. ಈ ಮೂಲಕ ಚಿತ್ರದ ಒಟ್ಟಾರೆ ಗಳಿಕೆ 16 ಕೋಟಿ ರೂಪಾಯಿ ಆಗಿದೆ ಎಂದು ಹೇಳಲಾಗಿದೆ. ಆದ್ರೆ ಚಿತ್ರ ತಂಡ ಯಾವುದೇ ಮಾಹಿತಿ ನೀಡಿಲ್ಲವಂತೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


