nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026
    Facebook Twitter Instagram
    ಟ್ರೆಂಡಿಂಗ್
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    • ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ
    • BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    • ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!
    • ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
    • ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅ.18 ರಿಂದ ಜಿಲ್ಲೆಗೆ ಉಪ ಲೋಕಾಯುಕ್ತರ ಭೇಟಿ : ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಸೂಚನೆ
    ತುಮಕೂರು October 14, 2024

    ಅ.18 ರಿಂದ ಜಿಲ್ಲೆಗೆ ಉಪ ಲೋಕಾಯುಕ್ತರ ಭೇಟಿ : ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಸೂಚನೆ

    By adminOctober 14, 2024No Comments3 Mins Read
    shubha kalyan

    ತುಮಕೂರು:  ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕ ಕುಂದು ಕೊರತೆ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ, ಲೋಕಾಯುಕ್ತ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ, ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪಾತ್ರ, ಜಿಲ್ಲೆಯಲ್ಲಿ ಬಾಕಿ ಇರುವ ಲೋಕಾಯುಕ್ತ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮಗಳನ್ನು ನಡೆಸಲಿದ್ದು, ಅಗತ್ಯ ಮಾಹಿತಿಯೊಂದಿಗೆ ಉಪ ಲೋಕಾಯುಕ್ತರ ಎಲ್ಲಾ ಕಾರ್ಯಕ್ರಮಗಳಲ್ಲೂ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಉಪ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ ದೂರು ಪ್ರಕರಣಗಳ ವಿಚಾರಣೆ ಮತ್ತು ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರಲ್ಲದೆ, ಈವರೆಗೆ ನೋಂದಣಿಯಾದ ದೂರು ಪ್ರಕರಣಗಳ ಮಾಹಿತಿ ಪಡೆದ ಅವರು, ಉಪ ಲೋಕಾಯುಕ್ತರ ಕಾರ್ಯಕ್ರಮಗಳಿಗೆ ಎಲ್ಲಾ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕು. ಲೋಕಾಯುಕ್ತ ಪ್ರಕರಣ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿಸಿಕೊಂಡಿದ್ದಲ್ಲಿ ಸೂಕ್ತ ಕಾರಣವನ್ನು ಉಪ ಲೋಕಾಯುಕ್ತರ ಗಮನಕ್ಕೆ ತರಬೇಕು ಎಂದು ತಿಳಿಸಿದರು.

    ಬಾಕಿ ಉಳಿದಿರುವ ಲೋಕಾಯುಕ್ತ ದೂರು ಅರ್ಜಿಗಳನ್ನು ವೈಯಕ್ತಿಕ ಗಮನಹರಿಸಿ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ವಿಲೇವಾರಿ ಮಾಡಲು ಕಾನೂನು ಚೌಕಟ್ಟಿನಲ್ಲಿ ಅವಕಾಶವಿಲ್ಲದಿದ್ದಲ್ಲಿ ದೂರುದಾರರರಿಗೆ ಹಿಂಬರಹ ನೀಡಬೇಕು. ಹಿಂಬರಹ ನೀಡಿರುವ ಬಗ್ಗೆ ಅಗತ್ಯ ದಾಖಲೆಗಳನ್ನು ಸಂಬAಧಿಸಿದ ಇಲಾಖಾಧಿಕಾರಿಗಳು ಹೊಂದಿರಬೇಕು ಎಂದು ನಿರ್ದೇಶನ ನೀಡಿದರು.

    ತಾಲ್ಲೂಕುವಾರು ಬಾಕಿ ಇರುವ ಲೋಕಾಯುಕ್ತ ದೂರು ಅರ್ಜಿಗಳ ಮಾಹಿತಿ ಪಡೆದ ಅವರು, ದೂರು ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ ಇತ್ತೀಚೆಗಷ್ಟೇ ವರ್ಗಾವಣೆ ಹೊಂದಿ ಅಧಿಕಾರವಹಿಸಿಕೊಂಡಿದ್ದೇನೆ. ದೂರು ಅರ್ಜಿಗಳ ಬಗ್ಗೆ ಮಾಹಿತಿ ಇಲ್ಲ ಎಂದು ನೆಪ ಹೇಳದೆ ಉಪ ಲೋಕಾಯುಕ್ತರಿಗೆ ಸಮರ್ಪಕ ಉತ್ತರವನ್ನು ನೀಡಬೇಕು ಎಂದು ತಾಕೀತು ಮಾಡಿದರು.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 49, ಕಂದಾಯ ಇಲಾಖೆಯ 20, ನಗರಾಭಿವೃದ್ಧಿ ಕೋಶದ 12, ಆರೋಗ್ಯ ಇಲಾಖೆ 1, ನಿರ್ಮಿತಿ ಕೇಂದ್ರದ 1 ದೂರು ಅರ್ಜಿಗಳು ಬಾಕಿ ಇವೆ ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

    ಉಪ ಲೋಕಾಯುಕ್ತರೊಂದಿಗೆ ಕರ್ನಾಟಕ ಲೋಕಾಯುಕ್ತ ಅಪರ ನಿಬಂಧಕ(ವಿಚಾರಣೆಗಳು-5)ರಾದ ಜೆ.ವಿ. ವಿಜಯಾನಂದ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ಕರ್ನಾಟಕ ಲೋಕಾಯುಕ್ತ ಉಪ ನಿಬಂಧಕ(ವಿಚಾರಣೆಗಳು-2)ರಾದ ಕೆ.ಎಂ. ಬಸವರಾಜಪ್ಪ ಹಾಗೂ ಉಪ ನಿಬಂಧಕ(ವಿಚಾರಣೆಗಳು-1)ರಾದ ಎನ್.ವಿ. ಅರವಿಂದ ಸೇರಿದಂತೆ ವಿವಿಧ ನ್ಯಾಯಾಧೀಶರು ಸಭೆಯಲ್ಲಿ ಹಾಜರಿದ್ದು, ಸಾರ್ವಜನಿಕರ ಅಹವಾಲುಗಳ ವಿಚಾರಣೆ ನಡೆಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ. ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಮ್ಮ ವಿಷಯ ನಿರ್ವಾಹಕರೊಂದಿಗೆ ದೂರು ಅರ್ಜಿಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕೆಂದು ಸೂಚಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

    ಉಪ ಲೋಕಾಯುಕ್ತರ ಕಾರ್ಯಕ್ರಮಗಳ ವಿವರ :

    ರಾಜ್ಯ ಉಪಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಹಾಗೂ ಮ.2:30 ರಿಂದ ಸಂಜೆ 5 ಗಂಟೆಯವರೆಗೆ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಅಹವಾಲು/ಕುಂದು–ಕೊರತೆ ಸ್ವೀಕಾರ/ ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ನಡೆಯಲಿದ್ದು, ಕರ್ನಾಟಕ ರಾಜ್ಯ ಲೋಕಾಯುಕ್ತದ ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ.ಎನ್. ಫಣೇಂದ್ರ ಹಾಗೂ ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಉದ್ಘಾಟಿಸುವರು.

    ನಂತರ ಸಂಜೆ 5:30 ರಿಂದ 6:30 ಗಂಟೆಯವರೆಗೆ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಪಾತ್ರ ಮತ್ತು ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ನಡೆಸಲಾಗುವುದು.

    ಮರು ದಿನ ಅಕ್ಟೋಬರ್ 19ರಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1:30 ಹಾಗೂ ಮ.2:30 ರಿಂದ ಸಂಜೆ 5 ಗಂಟೆಯವರೆಗೆ ತುಮಕೂರು ಜಿಲ್ಲೆಯ ಬಾಕಿ ಇರುವ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ನಡೆಯಲಿದೆ.

    ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧ್ಯಕ್ಷತೆವಹಿಸುವರು. ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಸೇರಿದಂತೆ ಕರ್ನಾಟಕ ಲೋಕಾಯುಕ್ತ ಕಚೇರಿಯ ವಿವಿಧ ಅಧಿಕಾರಿಗಳು ಭಾಗವಹಿಸುವರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ತಿಪಟೂರು ರೋಟರಿ ಕ್ಲಬ್ ಹಾಗೂ ಎನ್.ಆರ್.ಪಿ.ಯು. ಅಕಾಡೆಮಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೋ ದಿನದ ಅಂಗವಾಗಿ “ಪೋಲಿಯೋ…

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.