ತುಮಕೂರು: ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಹಾಗೂ ಸದಸ್ಯರು ಅಕ್ಟೋಬರ್ 19ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಧ್ಯಾಹ್ನ 2:30 ಗಂಟೆಗೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಜಿಲ್ಲೆಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆ/ಕಾರ್ಯಕ್ರಮಗಳ ಪ್ರಗತಿ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಗುವುದು.
ಜಿಲ್ಲಾ ವ್ಯಾಪ್ತಿಯಲ್ಲಿ ಅನುಸೂಚಿತ ಜಾತಿ/ಪಂಗಡಗಳ ಸಮುದಾಯದವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಂಘ ಸಂಸ್ಥೆ ಹಾಗೂ ಸಮುದಾಯದ ಜನಸಾಮಾನ್ಯರಿಂದ ಸಾರ್ವಜನಿಕ ಹಿತಾಸಕ್ತಿಯುಳ್ಳ ಮನವಿಗಳನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸ್ವೀಕೃತ ಮನವಿಗಳನ್ನು ಜಿಲ್ಲಾಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಯ ದಿನದಂದು ಅಧ್ಯಕ್ಷರಿಗೆ ಸಲ್ಲಿಸಲಿದ್ದಾರೆ.
ಸಮಿತಿ ಸದಸ್ಯರಾದ ರಮೇಶ್ ಲಕ್ಷ್ಮಣರಾವ್ ಜಾರಕಿಹೋಳಿ, ಡಾ.ಎಂ.ಚಂದ್ರಪ್ಪ, ಐಹೊಳೆ ದುರ್ಯೋಧನ ಮಹಾಲಿಂಗಪ್ಪ, ಜಿ.ಹಂಪಯ್ಯ ನಾಯಕ್ ಬಲ್ಲಟಗಿ, ಎಸ್.ಎನ್. ಸುಬ್ಬಾರೆಡ್ಡಿ(ಚಿನ್ನಕಾಯಲಪಲ್ಲಿ), ಬಸವಗೌಡ ತುರುವಿಹಾಳ್, ಅಬ್ಬಯ್ಯ ಪ್ರಸಾದ, ಬಸವರಾಜ್ ಮತ್ತಿಮೂಡ್, ನೇಮಿರಾಜ್ ನಾಯ್ಕ, ಎನ್. ಶ್ರೀನಿವಾಸಯ್ಯ, ಬಿ. ದೇವೇಂದ್ರಪ್ಪ, ಕೆ.ಸಿ. ವೀರೇಂದ್ರ ಪಪ್ಪಿ, ಕೃಷ್ಣಾನಾಯ್ಕ, ಕೆ.ಎಸ್. ಬಸವಂತಪ್ಪ, ಎನ್. ರವಿಕುಮಾರ್, ಡಾ.ಡಿ. ತಿಮ್ಮಯ್ಯ, ರಾಜೇಂದ್ರ ರಾಜಣ್ಣ, ಸಿ.ಎನ್. ಮಂಜೇಗೌಡ ಹಾಗೂ ಹೇಮಲತಾ ನಾಯಕ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296