ಚಿತ್ರದುರ್ಗ: ಕಾಲೇಜು ಕಟ್ಟಡದಿಂದ ಬಿದ್ದು ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಳ್ಳಕರೆ ಮೂಲದ ಪ್ರೇಮಾ (18) ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಡಾನ್ ಬಾಸ್ಕೊ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.
ಚಳ್ಳಕೆರೆ ಮೂಲದ ಪ್ರೇಮಾ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q