ತುಮಕೂರು : ರುಡ್ಸೆಟ್ ಸಂಸ್ಥೆಯು ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತವಾಗಿ 30 ದಿನಗಳ ಟಿವಿ ರಿಪೇರಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ತರಬೇತಿಯು ಡಿಸೆಂಬರ್ 18 ರಿಂದ ಆರಂಭವಾಗಲಿದ್ದು, ಟಿವಿ ಟೆಕ್ನಿಷಿಯನ್ ತರಬೇತಿಯಲ್ಲಿ ಬೇಸಿಕ್ನಿಂದ ಅತ್ಯಧಿಕ ತಂತ್ರಜ್ಞಾನದವರೆಗೆ ತರಬೇತಿ ನೀಡಲಾಗುವುದು. ಥಿಯರಿ ಜೊತೆಯಲ್ಲಿ ಪ್ರಾಕ್ಟಿಕಲ್ ತರಬೇತಿಯನ್ನು ಸಹ ನೀಡಲಾಗುವುದು. ಇಲೆಕ್ಟಾçನಿಕ್ ಸ್ಪೇರ್ ಪಾರ್ಟ್ಸ್, ಕಲರ್ ಟಿವಿ, ಆಂಡ್ರಾಯ್ಡ್, ಸ್ಮಾರ್ಟ್, 4ಏ ಟಿವಿ ಐಇಆ ಮತ್ತು ಐಅಆ ಟಿವಿ, ಮದರ್ ಬೋರ್ಡ್, ಸಾಫ್ಟ್ ವೇರ್ ಪವರ್ ಸಪ್ಲೆöÊ ಜೊತೆಯಲ್ಲಿ ಆಡಿಯೋ ಸಿಸ್ಟಮ್ ರಿಪೇರಿ, ಎಲ್ಲಾ ಕಂಪನಿಯ ಡಿಟಿಹೆಚ್ ಅಳವಡಿಕೆ ಮತ್ತು ಎಲೆಕ್ಟಾçನಿಕ್ ವಸ್ತುಗಳ ರಿಪೇರಿ ಬಗ್ಗೆ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್/ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296