nammatumakuru

    Subscribe to Updates

    Get the latest creative news from FooBar about art, design and business.

    What's Hot

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್

    August 5, 2026

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026
    Facebook Twitter Instagram
    ಟ್ರೆಂಡಿಂಗ್
    • 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
    • ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್
    • ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?
    • ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
    • ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
    • ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು
    • ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ
    • ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: 12 ಹೊಸ ಮತಗಟ್ಟೆ ಸ್ಥಾಪನೆಗೆ ಆಯೋಗದಿಂದ ಅನುಮೋದನೆ: ಎಡಿಸಿ
    Uncategorized October 20, 2024

    ತುಮಕೂರು: 12 ಹೊಸ ಮತಗಟ್ಟೆ ಸ್ಥಾಪನೆಗೆ ಆಯೋಗದಿಂದ ಅನುಮೋದನೆ: ಎಡಿಸಿ

    By adminOctober 20, 2024No Comments2 Mins Read
    dr n tippeswamy

    ತುಮಕೂರು:  ಜಿಲ್ಲೆಯ ವ್ಯಾಪ್ತಿಗೊಳಪಡುವ ತುಮಕೂರು ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಹೊಸದಾಗಿ 12 ಮತಗಟ್ಟೆ ಸ್ಥಾಪನೆ ಮಾಡಲು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತಂದರು.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ತುಮಕೂರು ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಹೊಸದಾಗಿ 12 ಮತಗಟ್ಟೆಗಳನ್ನು ಸ್ಥಾಪಿಸಲು ಚುನಾವಣಾ ಆಯೋಗಕ್ಕೆ ಸೆಪ್ಟೆಂಬರ್ ಮಾಹೆಯಲ್ಲಿ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.

    ಹೊಸ ಮತಗಟ್ಟೆಗಳ ವಿವರ:

    ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಕಿ.ಮೀ.ಗಿಂತ ಹೆಚ್ಚು ದೂರವಿರುವ ಮತಗಟ್ಟೆ ಹಾಗೂ 1500ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಹೊಸದಾಗಿ ಮತಗಟ್ಟೆಗಳನ್ನು ಸ್ಥಾಪಿಸಲು ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ನಗರ ವ್ಯಾಪ್ತಿಯ 2 ಕಿ.ಮೀ.ಗಿಂತ ಹೆಚ್ಚು ದೂರವಿರುವ ಎಸ್.ಎನ್.ಪಾಳ್ಯದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ(ಮತಗಟ್ಟೆ ಸಂಖ್ಯೆ-4ಎ) ; 1500ಕ್ಕೂ ಹೆಚ್ಚು ಮತದಾರರಿರುವ ಅಂತರಸನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ(ಮತಗಟ್ಟೆ ಸಂಖ್ಯೆ-9ಎ), ಶಿರಾಗೇಟ್ ಉತ್ತರ ಬಡಾವಣೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ(13ಎ), ಅಗ್ರಹಾರ ಶಿಶುವಿಹಾರ ಆವರಣ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ(30ಎ), ಗಾಂಧಿನಗರದ ವಿದ್ಯೋದಯ ಕಾನೂನು ಕಾಲೇಜು(73ಎ), ಚಾಂದನಿ ಚೌಕ ಭಾರತ ಮಾತಾ ಆಂಗ್ಲ ಹಿರಿಯ ಪ್ರಾಥಮಿಕ ಪಾಠಶಾಲೆ(83ಎ), ಭೈರವೇಶ್ವರ ಪದವಿ ಪೂರ್ವ ಕಾಲೇಜು(122ಎ), ಉಪ್ಪಾರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ(158ಎ), ಸರಸ್ವತಿ ಪುರಂ ವಿದ್ಯಾನಿಕೇತನ ಹಿರಿಯ ಪ್ರಾಥಮಿಕ ಪಾಠಶಾಲೆ(160ಎ), ಮರಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ(164ಎ), ಮರಳೂರು ಮಾವಿನತೋಪು ಅಂಕಿತ ಕಿರಿಯ ಪ್ರಾಥಮಿಕ ಪಾಠಶಾಲೆ(165ಎ), ಬಡ್ಡಿಹಳ್ಳಿ ಎಸ್.ಆರ್.ಎಸ್. ಹಿರಿಯ ಪ್ರಾಥಮಿಕ ಪಾಠಶಾಲೆ(220ಎ) ಸೇರಿ ಹೊಸದಾಗಿ 12 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

    ಅಲ್ಲದೆ ಶಿಥಿಲವಾಗಿರುವ ಕಟ್ಟಡ, ಅಗತ್ಯ ಮೂಲಭೂತ ಸೌಕರ್ಯಗಳಿಲ್ಲದ 129-ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ 2, 132–ತುಮಕೂರು ನಗರ ವಿ.ಸ.ಕ್ಷೇತ್ರದಲ್ಲಿ 4 ಹಾಗೂ 138–ಮಧುಗಿರಿ ವಿ.ಸ.ಕ್ಷೇತ್ರದಲ್ಲಿ 1 ಸೇರಿದಂತೆ ಒಟ್ಟು 7 ಮತಗಟ್ಟೆಗಳನ್ನು ಸ್ಥಳಾಂತರಿಸಲು ಆಯೋಗಕ್ಕೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ ಎಂದು ತಿಳಿಸಿದರು.

    ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ:

    ಪ್ರತಿ ವರ್ಷದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗಾಗಿ ಆಯಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಈಗಾಗಲೇ ಕಳೆದ ಆಗಸ್ಟ್ 20 ರಿಂದ ಮನೆ–ಮನೆ ಸಮೀಕ್ಷೆ ಕೈಗೊಂಡಿದ್ದು, ಅಕ್ಟೋಬರ್ 14ರ ಅಂತ್ಯಕ್ಕೆ ಶೇ.99.90ರಷ್ಟು ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದೆ. ಸಮೀಕ್ಷೆಯಲ್ಲಿ 1500ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆ, ಸ್ಥಳಾಂತರಗೊಳಿಸಲು ಉದ್ದೇಶಿಸಿರುವ ಮತಗಟ್ಟೆಗಳನ್ನು ಗುರುತಿಸಲಾಗಿದೆಯಲ್ಲದೆ ದಿನಾಂಕ:1–1–2025ನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಿ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ, ತೆಗೆದು ಹಾಕುವುದು, ತಿದ್ದುಪಡಿ ಸೇರಿದಂತೆ ಪರಿಷ್ಕರಣೆ ಕಾರ್ಯ ನಡೆಸಲಾಗಿದೆ ಎಂದು ತಿಳಿಸಿದರು.

    ಆಯೋಗದ ವೇಳಾಪಟ್ಟಿಯಂತೆ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 29ರಂದು ಪ್ರಕಟಿಸಲಾಗುವುದು. ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 29 ರಿಂದ ನವೆಂಬರ್ 28ರವರೆಗೂ ಅವಕಾಶ ನೀಡಲಾಗುವುದು. ಸ್ವೀಕೃತ ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿಸೆಂಬರ್ 24ರೊಳಗಾಗಿ ವಿಲೇವಾರಿ ಮಾಡಲಾಗುವುದು. ನಂತರ 2025ರ ಜನವರಿ 6ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

    ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ರೇಷ್ಮ ಸೇರಿದಂತೆ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕಾವೇರಿ ಕಿಚ್ಚು: ‘ಭೂಮಿ, ನೀರು, ಭಾಷೆ ವಿಚಾರ ಬಂದಾಗ ಕರ್ನಾಟಕ ಒಂದಾಗಬೇಕು’ : ಸರ್ವಪಕ್ಷ ಸಭೆಯಲ್ಲಿ ಸಿದ್ದರಾಮಯ್ಯ ಕರೆ

    August 3, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಮುಂಗಾರು ಮಳೆಯಿಲ್ಲದೇ ಕರ್ನಾಟಕದ 28 ಜಿಲ್ಲೆಗಳು ಬರಪೀಡಿತ ಪ್ರದೇಶ. ರಾಜ್ಯ ಸರಕಾರ ಕೇಂದ್ರ…

    ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್

    August 5, 2026

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.