nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    • ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
    • ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
    • ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
    • ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಡುಗು–ಸಿಡಿಲು ಸಹಿತ ಮಳೆ: ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ: ಜಿಲ್ಲಾಧಿಕಾರಿ
    Uncategorized October 20, 2024

    ಗುಡುಗು–ಸಿಡಿಲು ಸಹಿತ ಮಳೆ: ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ: ಜಿಲ್ಲಾಧಿಕಾರಿ

    By adminOctober 20, 2024No Comments2 Mins Read
    shubha kalyan

    Provided by
    Provided by

    ತುಮಕೂರು: ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು–ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

    ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ:

    ಭಾರಿ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ-ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು–ನೋವುಗಳು ಉಂಟಾಗಬಹುದಾದ್ದರಿಂದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ.

    ರಾಜ್ಯ/ಜಿಲ್ಲಾಡಳಿತ/ತಾಲ್ಲೂಕು ಆಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಗ್ರಾಮ ಪಂಚಾಯತಿಯ ವಿಪತ್ತು ನಿರ್ವಹಣಾ ಸಮಿತಿಗಳು ಪ್ರತಿ ಗ್ರಾಮಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ.

    ಸಾರ್ವಜನಿಕರಲ್ಲಿ ಮನವಿ :

    ನದಿ/ಹಳ್ಳದ/ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ/ಕರುಗಳನ್ನು ಮೇಯಿಸುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು, ಮತ್ತಿತರೆ ಚಟುವಟಿಕೆಗಳನ್ನು ನಡೆಸಬಾರದು. ನದಿ/ಹಳ್ಳ/ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಪೋಟೋ/ಸೆಲ್ಫಿಗಳನ್ನು ತೆಗೆಯಬಾರದು. ಮಕ್ಕಳು ಮತ್ತು ವಯೋವೃದ್ಧರನ್ನು ಮನೆಯಿಂದ ಹೊರಗಡೆ ಒಂಟಿಯಾಗಿ ತೆರಳದಂತೆ ಎಚ್ಚರಿಕೆ ವಹಿಸಬೇಕು. ಗುಡುಗು–ಮಿಂಚು, ಸಿಡಿಲು ಬಡಿಯುವ ಸಂದರ್ಭದಲ್ಲಿ ಮನೆಯ ಹೊರಗಡೆ ಇರುವವರು ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಿ ರಕ್ಷಣೆ ಪಡೆದುಕೊಳ್ಳಬೇಕು. ಮರ, ವಿದ್ಯುತ್ ಕಂಬ, ಜಲಾಶಯ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ ಜನ ಸಂದಣಿಯಾಗದಂತೆ ಅಂತರ ಕಾಪಾಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಕೆರೆ–ಕಟ್ಟೆಗಳ ಏರಿ/ಬಂಡ್/ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ನಿಂತಿದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್/ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ/ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟವಾಗಿದ್ದಲ್ಲಿ, ಇತರೆ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಾದ 7304975519, 0816–2213400, 155304ಕ್ಕೆ ಕರೆ ಮಾಡಿ ನೆರವು ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    June 17, 2026

    ತುಮಕೂರು : 2026–2027 ಸಾಲಿನ ಎಸ್ ಎಫ್ ಸಿ ಮುಕ್ತನಿಧಿ ಅನುದಾನದಲ್ಲಿ ಹಾಗೂ ನಗರಸಭಾ ನಿಧಿಯಲ್ಲಿ ಶೇ24.1, 7.25 ಹಾಗೂ…

    ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ

    June 17, 2026

    ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು

    June 17, 2026

    ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.