nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಳ್ಳು ದಾಖಲೆ ಸೃಷ್ಟಿ: ಉಪಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ
    ತುಮಕೂರು October 20, 2024

    ಸುಳ್ಳು ದಾಖಲೆ ಸೃಷ್ಟಿ: ಉಪಲೋಕಾಯುಕ್ತರ ಪ್ರಶ್ನೆಗೆ ತಡವರಿಸಿದ ಪಿಡಿಓ

    By adminOctober 20, 2024No Comments2 Mins Read
    lokayuktha

    ತುಮಕೂರು:  ಜಿಲ್ಲೆಯ ಕುಣಿಗಲ್ ತಾಲ್ಲೂಕು ಹುಲಿಯೂರು ದುರ್ಗ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆರ್. ವಿನಾಯಕ ಅವರು ಸುಳ್ಳು ದಾಖಲೆ ಸೃಷ್ಟಿಸಿ ವಂಚಿಸಿದ್ದಾರೆ ಎಂಬ ಸಾರ್ವಜನಿಕರ ಆರೋಪಕ್ಕೆ ಸಂಬಂಧಿಸಿದಂತೆ ಉಪ ಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ವಿನಾಯಕ ಅವರನ್ನು ಪ್ರಶ್ನಿಸಿದಾಗ ಸರಿಯಾದ ರೀತಿಯಲ್ಲಿ ದಾಖಲೆ ನೀಡದೆ ಉತ್ತರ ನೀಡಲು ತಡವರಿಸಿದ ಪ್ರಸಂಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೋಕಾಯುಕ್ತ ಪ್ರಕರಣಗಳ ತನಿಖೆ ಮತ್ತು ವಿಲೇವಾರಿ ಸಭೆಯಲ್ಲಿ ಈ ಪ್ರಸಂಗ ಜರುಗಿತು. ದೂರುದಾರರು ಮತ್ತು ಪ್ರತಿ ದೂರುದಾರರ ಸಮ್ಮುಖದಲ್ಲಿ ಪ್ರಕರಣಗಳ ವಿಚಾರಣೆ ನಡೆಸಿ, ಪಿಡಿಓ ವಿನಾಯಕ ಅವರಿಗೆ ಎಚ್ಚರಿಕೆ ನೀಡಿದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಸಾರ್ವಜನಿಕ ಸೇವೆಯಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ವಂಚಿಸುವುದು ಅಪರಾಧ. ಇಂತಹ ಅಪರಾಧಗಳನ್ನು ಲೋಕಾಯುಕ್ತ ಸಹಿಸುವುದಿಲ್ಲ. ಸಾರ್ವಜನಿಕರನ್ನು ವಂಚಿಸುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.


    Provided by
    Provided by

    ಕಾನೂನು ತೊಡಕಿಲ್ಲದ ಅರ್ಜಿಗಳನ್ನು ವಿಳಂಬ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕು. ಸಕಾರಣವಿಲ್ಲದೆ ಸಾರ್ವಜನಿಕರನ್ನು ಸರ್ಕಾರಿ ಕಚೇರಿಗೆ ಅಲೆದಾಡಿಸಬಾರದು. ಅಗತ್ಯ ದಾಖಲೆಗಳಿಲ್ಲದೆ ಕಾನೂನು ಬಾಹಿರವಾಗಿ ಖಾತೆ ಮಾಡಿ ಕೊಟ್ಟಿರುವ ದೂರುಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ವೀಕೃತವಾಗಿವೆ. ನಿಯಮಗಳನ್ನು ಮೀರಿ ಇಷ್ಟ ಬಂದಂತೆ ಕರ್ತವ್ಯ ನಿರ್ವಹಿಸುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

    ಮಧುಗಿರಿ ತಾಲ್ಲೂಕಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ಅನುದಾನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಸಲ್ಲಿಕೆಯಾಗಿದ್ದ ದೂರನ್ನು ಪರಿಶೀಲಿಸಿದ ಅವರು ಸುವರ್ಣ ನಿವಾಸ ಪ್ರೌಢಶಾಲೆಯು ನೋಂದಣಿಯಾಗದೆ ಸರ್ಕಾರಿ ಅನುದಾನವನ್ನು ಬಳಸಿಕೊಳ್ಳುತ್ತಿದೆ. ಕೂಡಲೇ ಸಂಸ್ಥೆಯ ವಿರುದ್ಧ ಕ್ರಮ ಕೈಗೊಂಡು ವಿದ್ಯಾರ್ಥಿಗಳನ್ನು ಬೇರೆ ಶಾಲೆಗೆ ದಾಖಲಿಸುವ ವ್ಯವಸ್ಥೆ ಮಾಡಬೇಕು ಎಂದು ಮಧುಗಿರಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು.

    ಸಭೆಯಲ್ಲಿ ಲೋಕಾಯುಕ್ತದ ವಿವಿಧ ಅಧಿಕಾರಿಗಳು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಹಾ ನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ, ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.