ಪುಣೆ: ಪುಣೆಯ ಮಂಡೈ ಮೆಟ್ರೋ ನಿಲ್ದಾಣದಲ್ಲಿ ಭಾರೀ ಬೆಂಕಿ ಅವಘಡವೊಂದು ಸಂಭವಿಸಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ.
ಮಹಾತ್ಮ ಫುಲೆ ಮಂಡೈ ಪ್ರದೇಶದ ಮೆಟ್ರೋ ನಿಲ್ದಾಣದ ನೆಲ ಮಹಡಿಯಲ್ಲಿ ಭಾನುವಾರ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗೆ ತರುವ ಪ್ರಯತ್ನ ಆರಂಭಿಸಿದ್ದಾರೆ.
ಸ್ಥಳೀಯ ಸಂಸದ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಮತ್ತು ಸಹಕಾರ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ಬೆಂಕಿಯನ್ನು ನಂದಿಸಲಾಗಿದೆ ಮತ್ತು ಘಟನೆಯು ಮೆಟ್ರೋ ಸೇವೆಯ ಮೇಲೆ ಪರಿಣಾಮ ಬೀರಲಿಲ್ಲ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q