ತುಮಕೂರು: ಋತುಸ್ರಾವದ ಸಂದರ್ಭದಲ್ಲಿ ಆಗುವ ವಿಪರೀತ ನೋವುಗಳಿಗೆ ಮನೆಮದ್ದುಗಳ ಸಲಹೆಯನ್ನು ಅಶ್ವಿನಿ ಆಯುರ್ವೇದ ವೈದ್ಯಕೀಯ ಕಾಲೇಜಿನ ವೈದ್ಯರಾದ ಡಾ.ಮೇಘ ಹಂಚಿಕೊಂಡರು.
ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಯೋಗದೊಂದಿಗೆ ಡಾ.ಎಚ್.ಎಮ್.ಗಂಗಾಧರಯ್ಯರವರ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು .
ಹೆಣ್ಣು ಮಕ್ಕಳು ಪ್ರೌಢಾವಸ್ಥೆಯಲ್ಲಿದ್ದಾಗ ಆರೋಗ್ಯದಲ್ಲಿ ಕೆಲವು ಬದಲಾವಣೆಗಳಾಗುತ್ತವೆ ಹಾಗೆ ಆ ಬದಲಾವಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿಕೊಟ್ಟರು ಮತ್ತು 12ರಿಂದ 21ನೇ ವಯಸ್ಸಿನ ಹೆಣ್ಣು ಮಕ್ಕಳ ಯೋಗ ಕ್ಷೇಮದಲ್ಲಿ ಆಯುರ್ವೇದವು ಮಹತ್ವವನ್ನು ವಹಿಸುತ್ತದೆ ಎಂದು ಅಶ್ವಿನಿ ಆಯುರ್ವೇದ ವೈದ್ಯಕೀಯ ಕಾಲೇಜಿನ ಬಲರೋಗ ವಿಭಾಗದ ಸಹಾಪ್ರಾಧ್ಯಪಕರಾದ ಮೀನಾಕ್ಷಿ ರವರು ನುಡಿದರು.
ವ್ಯಾಸ ಯೂನಿವರ್ಸಿಟಿಯಲ್ಲಿ ದ್ವಿತೀಯ ವರ್ಷದ ನ್ಯಾಚುರೋಪತಿ ಮೆಡಿಸಿನ್ ವ್ಯಾಸಂಗ ಮಾಡುತ್ತಿರುವ ಕುಮಾರಿ ಋತುಂಭರಾ ಜೆ.ಎಂ. ರವರು ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ಹೆಣ್ಣು ಮಕ್ಕಳಿಗೆ ಯೋಗಾಸನದ ಮಹತ್ವ ಹಾಗೂ ಮನೆಮದ್ದುಗಳ ಮೂಲಕ ಋತುಸ್ರಾವದಿಂದ ಯಾವ ರೀತಿ ನೋವು ಕಡಿಮೆ ಮಾಡಬಹುದೆಂದು ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಹೇಮಲತಾರವರು ಕಾರ್ಯಕ್ರಮವನ್ನು ಕುರಿತು ಮತ್ತು ಹೆಣ್ಣುಮಕ್ಕಳಿಗೆ ಅನೇಕ ಸಲಹೆ ಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಸಬಲೀಕರಣ ಘಟಕದ ಸಂಚಾಲಕರದ ಆಶಾ ಎಚ್.ಎಲ್. ಹಾಗೂ ಎಲ್ಲಾ ವಿಭಾಗದ ಮಹಿಳಾ ಉಪನ್ಯಾಸಕಿಯರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296