nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    • ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾದಾಪುರ ಗ್ರಾಮದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿದ ಶಾಸಕ ಅನಿಲ್ ಚಿಕ್ಕಮಾದು
    ತುಮಕೂರು October 22, 2024

    ಮಾದಾಪುರ ಗ್ರಾಮದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿದ ಶಾಸಕ ಅನಿಲ್ ಚಿಕ್ಕಮಾದು

    By adminOctober 22, 2024No Comments2 Mins Read
    madapura

    ಹೆಚ್.ಡಿ.ಕೋಟೆ :ಮಾದಾಪುರ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನೂತನವಾಗಿ ನಿರ್ಮಿಸಲಾಗಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೋಮವಾರ ಶಾಸಕ ಅನಿಲ್ ಚಿಕ್ಕಮಾದು ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು, ಸರಗೂರಿನಲ್ಲಿ ಸ್ಲಂ ಆಸ್ಪತ್ರೆಯನ್ನು, ತಾಯಿ ಮಕ್ಕಳ ಆಸ್ಪತ್ರೆ ಮತ್ತು ಹೆಚ್.ಡಿ.ಕೋಟೆ ಪಟ್ಟಣಕ್ಕೆ ಮಾತ್ರ ಸೀಮಿತವಾದ ಆಸ್ಪತ್ರೆಯನ್ನು ನಿರ್ಮಿಸಲು ರೂಪುರೇಷೆ ಮಾಡಿಕೊಳ್ಳಲಾಗುತ್ತಿದೆ ಎಂದರು.


    Provided by
    Provided by

    ಅದೇ ರೀತಿ ಮಾದಾಪುರದಿಂದ ಕೆ.ಬೆಳತ್ತೂರು ಮಾರ್ಗದ ರಸ್ತೆಗೆ ಮುಂದಿನ 15 ದಿನದಲ್ಲಿ ಭೂಮಿ ಪೂಜೆ ನೆರವೇರಲಿದೆ. ಜೆಎಲ್‌ಆರ್ ವತಿಯಿಂದ ಮಾದಾಪುರ ಆರೋಗ್ಯ ಕೇಂದ್ರಕ್ಕೆ ಸುಸಜ್ಜಿತ ಆಂಬುಲೆನ್ಸ್ ನೀಡಲಾಗುವುದು ಎಂದರು.

    ಮೈಸೂರು ಮಾನಂದವಾಡಿ ಸಂಪರ್ಕ ಕಲ್ಪಿಸಲು ರಸ್ತೆಗೆ ನಾಲ್ಕು ಪಥಗಳ ರಸ್ತೆಯನ್ನು ನಿರ್ಮಿಸಲು ಯೋಜನಾ ವರದಿ ತಯಾರಾಗುತ್ತಿದ್ದು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.

    ಜಿಲ್ಲಾ ಆರೋಗ್ಯಾಧಿಕಾರಿ ಕುಮಾರಸ್ವಾಮಿ ಮಾತನಾಡಿ ‘ಕಳೆದ ಒಂದು ವರ್ಷದ ಅವಧಿಯಲ್ಲಿ ತಾಲ್ಲೂಕಿಗೆ ರೆಡಿಯೋಲಾಜಿಯ ಬೇಡಿಕೆ ಇತ್ತು, ಅದನ್ನು ಒದಗಿಸಲಾಗಿದೆ, ಕಳೆದ 10 ತಿಂಗಳ ಅವಧಿಯಲ್ಲಿ 1200 ಕ್ಕೂ ಹೆಚ್ಚಿನ ಹೆರಿಯನ್ನು ಯಾವುದೇ ತೊಂದರೆಯಾಗದಂತೆ ಮಾಡಿಸಲಾಗಿದೆ. ಮನೆ ಮನೆಗೆ ತೆರಳಿ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆಯನ್ನು ಮನೆ ಮನೆಗೆ ಆರೋಗ್ಯ ಯೋಜನೆಯಡಿ ಮಾಡಲು ನಿರ್ಧರಿಸಲಾಗಿದ್ದು ಮುಂದಿನ ದಿನಗಳಲ್ಲಿ ಯೋಜನೆ ಪ್ರಾರಂಭವಾಗಲಿದೆ’ ಎಂದರು.

    ತಾಲ್ಲೂಕು ಆರೋಗ್ಯಾಧಿಕಾರಿ ಟಿ.ರವಿಕುಮಾರ್ ಮಾತನಾಡಿ, ಮೈಸೂರು ಮಾನಂದವಾಡಿ ರಸ್ತೆಯಲ್ಲಿರುವ ಮಾದಾಪುರ ಗ್ರಾಮದ ವ್ಯಾಪ್ತಿಯಲ್ಲಿ 9 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆ ಇದ್ದ ಹಿನ್ನಲೆ ಈ ಭಾಗಕ್ಕೆ ಒಂದು ಉತ್ತಮ ಆಸ್ಪತ್ರೆಯ ಅಗತ್ಯವಿದ್ದ ಕಾರಣ ₹1.80 ಲಕ್ಷಗಳ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನಿರ್ಮಿಸಲಾಗಿದ್ದು, ಶಸ್ತ್ರಚಿಕಿತ್ಸಾ ಕೊಠಡಿ, ಪುರುಷರ ವಾರ್ಡ್, ಮಹಿಳೆಯರ ವಾರ್ಡ್, ಹೆರಿಗೆ ಕೊಠಡಿ, ಮೂರು ಹಾಸಿಗೆಯುಳ್ಳ ಪ್ರತ್ಯೇಕ ವಾರ್ಡ್‌ಗಳುಳ್ಳ ಕೊಠಡಿಗಳನ್ನು ನಿರ್ಮಿಸಲಾಗಿದೆ, ಕಚೇರಿ, ಲ್ಯಾಬ್, ಶೌಚಾಲಯ ಸೇರಿದಂತೆ ಉತ್ತಮ ರೀತಿಯಲ್ಲಿ ನಿರ್ಮಾಣಗೊಂಡಿದ್ದು ಉತ್ತಮ ಸೇವೆ ನೀಡಲಿದೆ ಎಂದರು. ಈ ಆಸ್ಪತ್ರೆಗೆ ಸಿಬ್ಬಂದಿಗಳ ಕೊರತೆ ಇದ್ದು ಇದನ್ನು ಮುಂದಿನ ದಿನಗಳಲ್ಲಿ ಶಾಸಕ ಅನಿಲ್ ಚಿಕ್ಕಮಾದುರವರು ಸರ್ಕಾರದ ಗಮನ ಸೆಳೆದು ಭರ್ತಿ ಮಾಡಿಸಬೇಕು ಎಂದು ಮನವಿ ಮಾಡಿದರು.

    ತಹಶೀಲ್ದಾರ್ ಶ್ರೀನಿವಾಸ್, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಧರಣೇಶ್, ವೈದ್ಯೆ ಚಂದ್ರಕಲಾ, ಹೈರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯ ನಾಗರಾಜು, ಮಂಗಳಾ, ಚಂದ್ರು, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎನ್. ಮಹೇಶ್ ನಾಯಕ, ಇನ್ಸ್ಪೆಕ್ಟರ್ ಶಬ್ಬೀರ್ ಹುಸೇನ್, ಮುಖಂಡರಾದ ಎಚ್.ಸಿ. ಮಂಜುನಾಥ್, ಮಲ್ಲೇಶ್, ನಾಗೇಶ್, ಚಿಕ್ಕನಾಯಕ, ಹೆಜ್ಜೂರಯ್ಯ, ಕಾಳಪ್ಪ, ಅನಿತಾ, ಜಯರಾಂ, ಸುಧಾ, ಚಿನ್ನಸ್ವಾಮಿ, ರಾಜನಾಯಕ, ಮನುಗನಹಳ್ಳಿ ಮಾದಪ್ಪ, ಎಸ್. ಮಲ್ಲು, ರವಿಕುಮಾರ್, ಶಿವಣ್ಣ, ದೇವಮ್ಮಣಿ, ದಿನೇಶ್, ಎಂ.ಡಿ. ಮಂಚಯ್ಯ, ಮಾದಯ್ಯ, ನಿಂಗನಾಯಕ, ಮಹೇಶ್, ರಂಗಯ್ಯ, ಸಣ್ಣಸ್ವಾಮಿನಾಯಕ, ರವಿರಾಜ್ ಇದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ತಿಪಟೂರು: ನಗರದ ಹೊರವಲಯದ ಗಾಂಧಿನಗರದ ಬಳಿ ಇರುವ ಕೃಷ್ಣಮೂರ್ತಿ ಎಂಬುವವರಿಗೆ ಸೇರಿದ ತೋಟದ ಬಾವಿಯೊಂದಕ್ಕೆ ಇಂದು ಬೆಳಗ್ಗೆ ಚಿರತೆ ಬಿದ್ದಿರುವ…

    ಅದೃಷ್ಟ ಒಲಿದು ಬಂದಾಗ

    February 14, 2026

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.