ಚೆನ್ನೈ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು 2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಲು ಪ್ರತಿಪಾದಿಸಿದ ನಂತರ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೂಡ ಇಂತಹದ್ದೇ ಹೇಳಿಕೆಯನ್ನು ನೀಡಿದ್ದಾರೆ.
ಚೆನ್ನೈನ ತಿರುವನ್ಮಿಯೂರಿನ ದರ್ಶನೀಶ್ವರ ದೇವಸ್ಥಾನದಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಆಯೋಜಿಸಿದ್ದ 31 ಜೋಡಿ ವಿವಾಹಗಳ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಟಾಲಿನ್, ಹದಿನಾರು ಮಕ್ಕಳನ್ನು ಹೊಂದಿ ಅಷ್ಟೇ ಸಂಪದ್ಭರಿತವಾದ ಜೀವನವನ್ನು ತಮ್ಮದಾಗಿಸಿಕೊಳ್ಳಬೇಕು. ಈಗ ಅಂತಹ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ.
ಕೆಲವು ರಾಜ್ಯಗಳಲ್ಲಿ ಜನಸಂಖ್ಯೆ ಹೆಚ್ಚಾಗಿರುವುದರಿಂದ ಲೋಕಸಭೆ ಕ್ಷೇತ್ರಗಳು ಹೆಚ್ಚಾಗಿವೆ. ಅವರೇ ನಮ್ಮನ್ನು ಆಳುತ್ತಿದ್ದಾರೆ. ಆದರೆ ನಾವು ಜನಸಂಖ್ಯೆ ನಿಯಂತ್ರಣ ಹೇರಿಕೊಂಡಿದ್ದರ ಪರಿಣಾಮ ತಮಿಳುನಾಡಿನಲ್ಲಿ ಕ್ಷೇತ್ರಗಳು ಕಡಿಮೆಯಾಗುತ್ತಿವೆ. ತಮಿಳು ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ ಕಡಿಮೆ ಮಕ್ಕಳನ್ನು ಹೊಂದಲು ನಮ್ಮನ್ನು ಏಕೆ ನಿರ್ಬಂಧಿಸಬೇಕು? ಜನಸಂಖ್ಯೆ ಆಧಾರದ ಮೇಲೆ ಸಂಸತ್ ಸ್ಥಾನಗಳನ್ನು ನಿರ್ಧರಿಸುನಾವುದರಿಂದ 16 ಮಕ್ಕಳನ್ನು ಏಕೆ ಗುರಿಯಾಗಿಸಿಕೊಳ್ಳಬಾರದು? ಎಂದು ಪ್ರಶ್ನಿಸಿದ್ದಾರೆ.
ಆಂಧ್ರ ಸರ್ಕಾರವು ವಯಸ್ಸಾದ ಜನಸಂಖ್ಯೆಯಿಂದಾಗಿ ಹೆಚ್ಚಿನ ಮಕ್ಕಳನ್ನು ಹೊಂದಿರುವ ಕುಟುಂಬಗಳನ್ನು ಪ್ರೋತ್ಸಾಹಿಸಲು ಯೋಜಿಸುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬುನಾಯ್ಡು ಇತ್ತೀಚೆಗೆ ಘೋಷಿಸಿದ್ದರು. ಅಷ್ಟೇ ಅಲ್ಲ, ದಕ್ಷಿಣ ಭಾರತದ ರಾಜ್ಯಗಳ ಜನರನ್ನು ಹೆಚ್ಚು ಮಕ್ಕಳನ್ನು ಹೊಂದಲು ಒತ್ತಾಯಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296