nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು

    March 20, 2026

    ತುಮಕೂರು: ಮಾರ್ಚ್ 23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    March 20, 2026

    ತುಮಕೂರು: ಅಡುಗೆ ಅನಿಲ ಸಮಸ್ಯೆ: ಸಹಾಯವಾಣಿಗೆ ಕರೆ ಮಾಡಿ

    March 20, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು
    • ತುಮಕೂರು: ಮಾರ್ಚ್ 23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ತುಮಕೂರು: ಅಡುಗೆ ಅನಿಲ ಸಮಸ್ಯೆ: ಸಹಾಯವಾಣಿಗೆ ಕರೆ ಮಾಡಿ
    • ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
    • ಹುಳಿಯಾರು: ಲಾಕಪ್‌ ಡೆತ್‌ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಜಿ.ಪರಮೇಶ್ವರ್‌ ಆದೇಶ
    • ಹುಳಿಯಾರು:  ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಸಾವು: ಪೊಲೀಸ್ ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ
    • ಶಿವಮೊಗ್ಗ: ಮೃಗಾಲಯದಲ್ಲಿ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿ
    • ಮಾರ್ಚ್ 26ರಂದು ಕಲ್ಪತರು ಕಾಲೇಜಿನಲ್ಲಿ ವಿಟಿಯು 27ನೇ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶೇಷಚೇತನರಿಗಾಗಿ ಕಡ್ಡಾಯವಾಗಿ ಶೇ.5ರಷ್ಟು ಅನುದಾನ ಮೀಸಲಿಡಬೇಕು: ದಾಸ್ ಸೂರ್ಯವಂಶಿ
    ತುಮಕೂರು October 22, 2024

    ವಿಶೇಷಚೇತನರಿಗಾಗಿ ಕಡ್ಡಾಯವಾಗಿ ಶೇ.5ರಷ್ಟು ಅನುದಾನ ಮೀಸಲಿಡಬೇಕು: ದಾಸ್ ಸೂರ್ಯವಂಶಿ

    By adminOctober 22, 2024No Comments2 Mins Read
    das suryavamshi

    ತುಮಕೂರು: ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆ ಮತ್ತು ಅನುದಾನಗಳಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖೆಗಳು ವಿಶೇಷಚೇತನರಿಗಾಗಿ ಶೇ.5ರಷ್ಟು ಅನುದಾನವನ್ನು ಮೀಸಲಿಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಆಯುಕ್ತ ದಾಸ್ ಸೂರ್ಯವಂಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲೆಯ ವಿಕಲಚೇತನರ ಪುನರ್ವಸತಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರದ ಅನುದಾನದಲ್ಲಿ ಶೇ.5ರಷ್ಟು ವಿಶೇಷಚೇತನರಿಗಾಗಿ ಮೀಸಲಿಡಬೇಕೆಂದು ಸರ್ಕಾರದ ಆದೇಶವಿದ್ದರೂ ಸಹ ಕೆಲವು ಇಲಾಖೆಗಳಲ್ಲಿ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.


    Provided by
    Provided by

    ಜಿಲ್ಲೆಯಲ್ಲಿ 3,554 ವಿಶೇಷಚೇತನ ವಿದ್ಯಾರ್ಥಿಗಳು 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಲ್ಲಾ ಶಾಲೆಗಳಲ್ಲೂ ವಿಶೇಷಚೇತನ ಮಕ್ಕಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

    ಅಂಧ ಮತ್ತು ವಿಕಲಚೇತನ ಮಕ್ಕಳಿಗಾಗಿ ಎಲ್ಲಾ ಶಾಲೆಗಳಲ್ಲೂ ರ‍್ಯಾಂಪ್ ಹಾಗೂ ಅಡೆ–ತಡೆ ರಹಿತ ಶೌಚಾಲಯಗಳನ್ನು ನಿರ್ಮಿಸಬೇಕು. ವಿಶೇಷಚೇತನ ಮಕ್ಕಳ ತರಗತಿಗಳನ್ನು ಕೆಳಮಹಡಿಯ ಕೊಠಡಿಗಳಲ್ಲಿ ನಡೆಸಬೇಕು. ಜಿಲ್ಲೆಯಲ್ಲಿರುವ ಎಲ್ಲಾ ವಸತಿ ಶಾಲೆಗಳಲ್ಲಿ ಶೇ.10ರಷ್ಟು ವಿಕಲಚೇತನ ಮಕ್ಕಳಿಗೆ ಪ್ರವೇಶಾತಿ ನೀಡಬೇಕು ಎಂದು ನಿರ್ದೇಶನ ನೀಡಿದರು.

    ಗ್ರಾಮ ಪಂಚಾಯಿತಿಗಳಲ್ಲಿ ವಿಕಲಚೇತನರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ, ವೈದ್ಯಕೀಯ ಹಾಗೂ ಪುನರ್ವಸತಿ ಸೌಲಭ್ಯಗಳಿಗೆ ಅನುದಾನ ಬಳಕೆಯಾಗುವಂತೆ ಕ್ರಿಯಾಯೋಜನೆ ತಯಾರಿಸಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷಚೇತನರ ಸಂಜೀವಿನಿ ಸ್ವಸಹಾಯ ಸಂಘಗಳನ್ನು ಸ್ಥಾಪಿಸುವ ಮೂಲಕ ವಿಕಲಚೇತನರನ್ನು ಆರ್ಥಿಕವಾಗಿ ಸಬಲರನ್ನಾಗಿಸಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಜಿಲ್ಲಾ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಮನಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಕಲಚೇತನರ ಮೀಸಲಾತಿ ಪ್ರಮಾಣವನ್ನು ಶೇ.3 ರಿಂದ ಶೇ.5ಕ್ಕೆ ಏರಿಕೆ ಮಾಡಲಾಗಿದ್ದು, ಎಲ್ಲಾ ಇಲಾಖೆಗಳಲ್ಲೂ ಮುಂಬರುವ ಯೋಜನೆಗಳಲ್ಲಿ ಈ ಮೀಸಲಾತಿ ಪ್ರಮಾಣವನ್ನು ಅನುಷ್ಠಾನಗೊಳಿಸುವಂತೆ ಈಗಾಗಲೇ ಎಲ್ಲಾ ಇಲಾಖೆಗಳಿಗೂ ಸೂಚಿಸಲಾಗಿದೆ. ಅಧಿಕಾರಿಗಳು ವ್ಯಾಪಕವಾಗಿ ಈ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ವಿಕಲಚೇತನ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ತಿಳಿಸಲಾಗಿದೆ ಎಂದರಲ್ಲದೆ, ಜಿಲ್ಲಾಸ್ಪತ್ರೆಯಲ್ಲಿ ವಿಕಲಚೇತನರ ಚಿಕಿತ್ಸೆಗಾಗಿ ಪ್ರತ್ಯೇಕ ಚಿಕಿತ್ಸಾ ಕೊಠಡಿ ತೆರೆಯಲಾಗಿದೆ ಎಂದು ತಿಳಿಸಿದರು.

    ಜಿಲ್ಲೆಯ ವಿಕಲಚೇತನರಿಗೆ ಸರ್ಕಾರದ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಒದಗಿಸಲು 320 ಗ್ರಾಮೀಣ ಪುನರರ್ವಸತಿ ಕಾರ್ಯಕರ್ತರನ್ನು ನೇಮಿಸಲಾಗಿದೆ. ವಿಕಲಚೇತನ ಮತ್ತು ಅಶಕ್ತ ವೃದ್ಧರನ್ನು ಆರೈಕೆ ಮಾಡುವವರಿಗೆ ಪ್ರತಿ ತಿಂಗಳು 1000 ಪಿಂಚಣಿ ನೀಡುವ ವಿಶೇಷ ಯೋಜನೆಯನ್ನು ಜಾರಿಯಾಗಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ತುಮಕೂರು: ಮಾರ್ಚ್ 23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    March 20, 2026

    ತುಮಕೂರು: ಅಡುಗೆ ಅನಿಲ ಸಮಸ್ಯೆ: ಸಹಾಯವಾಣಿಗೆ ಕರೆ ಮಾಡಿ

    March 20, 2026

    ಹುಳಿಯಾರು: ಲಾಕಪ್‌ ಡೆತ್‌ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಜಿ.ಪರಮೇಶ್ವರ್‌ ಆದೇಶ

    March 20, 2026

    Comments are closed.

    Our Picks

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಶಿರಾ: ಬರಗೂರು ಸಮೀಪ KSRTC ಬಸ್‌ ಗೆ ಬೈಕ್‌ ಡಿಕ್ಕಿ, ಇಬ್ಬರು ಸಾವು

    March 20, 2026

    ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ಬರಗೂರು ಸಮೀಪ ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ…

    ತುಮಕೂರು: ಮಾರ್ಚ್ 23ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

    March 20, 2026

    ತುಮಕೂರು: ಅಡುಗೆ ಅನಿಲ ಸಮಸ್ಯೆ: ಸಹಾಯವಾಣಿಗೆ ಕರೆ ಮಾಡಿ

    March 20, 2026

    ಬೆಂಗಳೂರಿನಲ್ಲಿ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್ ಅಭಾವ; ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

    March 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.