ತುಮಕೂರು: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದ 20 ವರ್ಷ ಮೇಲ್ಪಟ್ಟವರಲ್ಲಿ ಫೈಲೇರಿಯ ರೋಗ ಪತ್ತೆ ಹಚ್ಚುವ ಉದ್ದೇಶದಿಂದ ಅಕ್ಟೋಬರ್ 23 ರಿಂದ 25ರವರೆಗೆ ಫೈಲೇರಿಯ ರಕ್ತಲೇಪನ ಸಂಗ್ರಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ರಕ್ತಲೇಪನ ಸಂಗ್ರಹಣಾ ಕಾರ್ಯಕ್ಕಾಗಿ ಜಿಲ್ಲೆಯ ಪ್ರತಿ ತಾಲ್ಲೂಕಿಗೆ ತಲಾ 2 ತಂಡಗಳನ್ನು ನಿಯೋಜಿಸಲಾಗಿದ್ದು, ಸಂಗ್ರಹಣಾ ಕಾರ್ಯಕ್ಕಾಗಿ ಭೇಟಿ ನೀಡುವ ಆರೋಗ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


