ಪಾವಗಡ: 108ಕ್ಕೆ ಕರೆ ಮಾಡಿ 7 ಗಂಟೆ ಕಳೆದರೂ ಆಂಬುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಮನೆಯಲ್ಲಿಯೇ ಹೆರಿಗೆಯಾದ ಘಟನೆ ತಾಲ್ಲೂಕಿನ ಪೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಗ್ರಾಮೀಣ ಭಾಗದಲ್ಲಿ ತುರ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ಕೇಳಿ ಬಂದಿದೆ.
ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ವೇಳೆ ತಕ್ಷಣವೇ 108 ಕ್ಕೆ ಕರೆ ಮಾಡಿ, ವಿವರ ನೀಡಲಾಗಿದೆ. ಆದರೆ ಗಂಟೆಗಟ್ಟಲೆ ಕಾದರೂ ಆಂಬುಲೆನ್ಸ್ ಬರಲಿಲ್ಲ. ಕೊನೆಗೆ ಮಹಿಳೆ ಮನೆಯಲ್ಲಿಯೇ ಹೆರಿಗೆಯಾದ ಘಟನೆ ನಡೆದಿದ್ದು, ಮಹಿಳೆಯ ಪ್ರಾಣಕ್ಕೆ ತೊಂದರೆಯಾಗಿದ್ದರೆ ಹೊಣೆ ಯಾರು? ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪಾವಗಡದ ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಕಿರಣ್ ರವರಿಗೆ ಈ ವ್ಯವಸ್ಥೆಯನ್ನು ಸರಿಪಡಿಸಲು ಮನವಿ ಪತ್ರವನ್ನು ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ತರುಣ್, ಸರಕಾರದಿಂದ 4 ಆಂಬುಲೆನ್ಸ್ ನೀಡಲಾಗಿದೆ ಹಾಗೂ ಸೋಲಾರ್ ವತಿಯಿಂದ 2 ಆಂಬುಲೆನ್ಸ್ ನೀಡಲಾಗಿದೆ ಆದರೆ ಈ ಆಂಬುಲೆನ್ಸ್ ಸಾರ್ವಜನಿಕರ ಉಪಯೋಗಕ್ಕೆ ದೊರಕುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವರದಿ : ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy