nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026
    Facebook Twitter Instagram
    ಟ್ರೆಂಡಿಂಗ್
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    • ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
    • ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೀಪಾವಳಿ: ಹೆಚ್ಚು ಶಬ್ದ ಮಾಡುವ ಪಟಾಕಿಗಳ ನಿಷೇಧ
    ರಾಜ್ಯ ಸುದ್ದಿ October 24, 2024

    ದೀಪಾವಳಿ: ಹೆಚ್ಚು ಶಬ್ದ ಮಾಡುವ ಪಟಾಕಿಗಳ ನಿಷೇಧ

    By adminOctober 24, 2024No Comments2 Mins Read
    fireworks deepavali

    ತುಮಕೂರು: ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 125 ಡೆಸಿಬಲ್‌ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.

    ಜಿಲ್ಲೆಯ ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಹಾಗೂ ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಈ ನಿಷೇಧಕ್ಕೆ ಸೂಚನೆ ನೀಡಲಾಗಿದೆ. ದೀಪಾವಳಿ ಹಬ್ಬವನ್ನು ಸಿಡಿಮದ್ದು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಬೇಕು.

    ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿಗಳನ್ನು ಸಿಡಿಸುವುದು, ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿ ಮದ್ದುಗಳ ಮಾರಾಟವನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರದ ಸುತ್ತ–ಮುತ್ತ ಯಾವುದೇ ರೀತಿಯ ಶಬ್ದ ಉಂಟು ಮಾಡುವ ನಿಷೇಧಿತ ಪಟಾಕಿ, ಸಿಡಿಮದ್ದುಗಳನ್ನು ಬಳಸಬಾರದು. ಸಾರ್ವಜನಿಕರು ನಗರ ಮತ್ತು ಪಟ್ಟಣದ ಚಿಕ್ಕ–ಚಿಕ್ಕ ಬೀದಿಗಳಲ್ಲಿ ಪಟಾಕಿ, ಸಿಡಿಮದ್ದು ಹಾಗೂ ಬಾಣ–ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯವಾಗುವ ಸಾಧ್ಯತೆಯಿದ್ದು, ಪಟಾಕಿ ಹಾಗೂ ಸಿಡಿ ಮದ್ದುಗಳನ್ನು ವಸತಿ ಪ್ರದೇಶಗಳ ಬದಲು ಮೈದಾನಗಳಲ್ಲಿ ಸಿಡಿಸಬೇಕೆಂದು ಮನವಿ ಮಾಡಿದ್ದಾರೆ.

    ಪಟಾಕಿ ಮಾರಾಟಗಾರರಿಗೆ ಸೂಚನೆ :

    ಪಟಾಕಿ ಮಾರಾಟಗಾರರು ತಮ್ಮ ಮಳಿಗೆ / ಗೋದಾಮುಗಳಲ್ಲಿ ಹಸಿರು ಪಟಾಕಿ ಅಲ್ಲದೆ ಇನ್ನಾವುದೇ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ. ದಾಸ್ತಾನು ಮಾಡಿದ್ದಲ್ಲಿ ಇಡೀ ಮಳಿಗೆ/ಗೋದಾಮುಗಳನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಪಟ್ಟ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
    ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಇರುತ್ತದೆ. ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ. ಅಂತಹ ಪಟಾಕಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

    ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಕಿಗಳನ್ನು ಮಾತ್ರ ಬಳಸಬೇಕು ಮತ್ತು ಪ್ರಮುಖವಾಗಿ ಹಸಿರು ಪಟಾಕಿ ಮಳಿಗೆಯಲ್ಲಿ ತಯಾರಕರು, ಮಾರಾಟಗಾರರು ಮತ್ತು ಎಜೆಂಟ್‌ಗಳಿಗೆ ಮಾತ್ರ ಅನುಮತಿಸಲಾಗುವುದು.
    ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್ಟುಗಳನ್ನು ರ‍್ಯಾಂಡಮ್ ಆಗಿ ಸಂಗ್ರಹಿಸಿ, ನಿಗಧಿತ ವಿಧಿ ವಿಧಾನಗಳ ಮೂಲಕ ಅವುಗಳ ಶಬ್ದ ಮಟ್ಟವನ್ನು ಮಾಪನ ಮಾಡಲಾಗುವುದು. ನಿಗದಿತ ಗುಣಮಾಪನಗಳಿಗೆ ಸರಿ ಹೊಂದದಿದ್ದಲ್ಲಿ, ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

    ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.

    ಹಸಿರು ಪಟಾಕಿ ಬಳಸುವ ಬಗ್ಗೆ ಜಿಲ್ಲಾಡಳಿತದಿಂದ ಸಾರ್ವಜನಿಕರು ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

    ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ವತಿಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗೂ ಸಂಬAಧಿತ ವಸ್ತು ಹಾಗೂ ಸಾಗಾಟ ಮಾಡುವ ವಾಹನವನ್ನು ಸಾರಿಗೆ ಇಲಾಖೆ ವತಿಯಿಂದ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

    ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ/ಸಿಡಿಮದ್ದು ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಹಾಗೂ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ತಯಾರು/ ಮಾರಾಟ ಮಾಡುವ ವ್ಯಕ್ತಿ/ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

     ರಾಘವೇಂದ್ರ ಅಡಿಗ ಎಚ್ಚೆನ್. ‘ಪುಣ್ಯಕೋಟಿ’ ಹಾಡನ್ನು ಕೇಳದ ಕಿವಿಗಳೆ ಇಲ್ಲ ಎನ್ನಬಹುದು. ಅಂತಹ “ಪುಣ್ಯಕೋಟಿ” ಹಾಡನ್ನು ಖ್ಯಾತ ಕಾದಂಬರಿಕಾರ, ಬರಹಗಾರ,…

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.