ಸರಗೂರು: ಹಿಂದುಳಿದ ವರ್ಗಗಳ ಜಾತಿ ಜನಸಂಖ್ಯೆ ಆಧಾರದ ಮೇಲೆ ಜಾತಿಗಣತಿ ಮಾಡಿ ಒಳ ಮೀಸಲಾತಿಯನ್ನು ಸರ್ಕಾರ ಘೋಷಿಸಬೇಕು ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಟೋಕನ್ ನಾಗರಾಜು ಹೇಳಿದರು.
ಪಟ್ಟಣದ ಆರ್ಯ ಈಡಿಗ ಸಮುದಾಯದ ಭವನದಲ್ಲಿ ಗುರುವಾರದಂದು ಸಭೆಯನ್ನು ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸರ್ಕಾರದಿಂದ ಹಿಂದುಳಿದ ವರ್ಗಗಳ ಒಳ ಮೀಸಲಾತಿ ಜಾರಿ ಮಾಡಿದ್ದರೆ, ಹಿಂದುಳಿದ ಬಡಜನರಿಗೆ ಅನುಕೂಲವಾಗುತ್ತ ಎಂದರು.
ಒಳಮೀಸಲಾತಿಯಿಂದ ಹಿಂದುಳಿದ ವರ್ಗಗಳು ಸೌಲಭ್ಯಗಳನ್ನು ಪಡೆಯಲು ಕಷ್ಟ ಪಡುವಂತಾಗಿದೆ. ಮೀಸಲಾತಿಯಿಂದ ವಂಚಿತವಾಗಿರುವ ಜಾತಿಗಳು ಈಡಿಗ ಸಮಾಜ, ಕುರುಬಗೌಡ , ನಾಮಧಾರಿಗೌಡ, ಸವಿತ ಸಮಾಜ, ವಿಶ್ವಕರ್ಮ ಇನ್ನೂ ಹಲವಾರು ಜಾತಿಗಳು ಹಿಂದುಳಿದ ಜಾತಿಗಳು ಒಳಮೀಸಲಾತಿ ಇಲ್ಲದೆ , ಇತರೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಜನಗಣತಿ ಆಧಾರದ ಮೇಲೆ ಒಳಮೀಸಲಾತಿ ಜಾರಿ ಮಾಡಬೇಕು. ಹಿಂದುಳಿದ ವರ್ಗಗಳು ಒಳಮೀಸಲಾತಿ ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಬೇಕು. ರಾಜ್ಯ ಸರ್ಕಾರಗಳು ತಾಯ್ತನ ಮತ್ತು ವಿವೇಕಯುತ ಮನಸ್ಸಿನಿಂದ ಕಾರ್ಯಪ್ರವೃತ್ತಾರಾಗಿ ಹಿಂದುಳಿದ ವರ್ಗಗಳ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರಗಳು ಇಲ್ಲಿವರೆಗೂ ಒಳ ಮೀಸಲಾತಿ ಜಾರಿಗೆ ಮುಂದಾಗಿಲ್ಲ.ಮುಖ್ಯಮುಂತ್ರಿ ಸಿದ್ದರಾಮಯ್ಯ ಹಿಂದುಳಿದ ನಾಯಕರು ಆದ್ದರಿಂದ ಜನಸಂಖ್ಯೆ ಆಧಾರದ ಮೇಲೆ ಅನುಗುಣವಾಗಿ ಜಾತಿಗಣತಿ ಮಾಡಿ ಒಳ ಮೀಸಲಾತಿಯನ್ನು ಜಾರಿಗೆ ತರಲು ಮುಂದಾಗಬೇಕು ಎಂದು ಆಗ್ರಹಿಸಿದರು.
ವರದಿ: ಹಾದನೂರು ಚಂದ್ರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q